More

    ಎತ್ತಿನ ಚಕ್ಕಡಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

    ಹಾವೇರಿ: ಎತ್ತಿನ ಚಕ್ಕಡಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಗುತ್ತಲ-ಹಾವನೂರ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ.
    ಸವಣೂರ ತಾಲೂಕಿನ ಹುರಳಿಕುಪ್ಪಿ ಗ್ರಾಮದ ಮಹೇಶ ಸಹದೇವಪ್ಪ ಜೋಗಿ (31) ಮೃತ ವ್ಯಕ್ತಿ.
    ಈತ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಎತ್ತಿನ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸ್ಥಳದಲ್ಲಿಯೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts