ಎಮ್ಮೆಗೆ ಬುಲೆಟ್ ಡಿಕ್ಕಿ: ಎಮ್ಮೆ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ, ತಾಯಿ-ಮಗು ಪರಿಸ್ಥಿತಿ ಚಿಂತಾಜನಕ..

Bullet
Published on

ಕಲಬುರಗಿ: ಎಮ್ಮೆಯೊಂದಕ್ಕೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಎಮ್ಮೆ ಸ್ಥಳದಲ್ಲೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿದ್ದ ಮಗು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಮಹಾದೇವಿ ಹಾಗೂ ನಾಲ್ಕು ವರ್ಷದ ಮಗು ಸ್ಮಿತಾ ಪರಿಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರ ದೇವಿಂದ್ರಪ್ಪ ಹಾಗೂ ಬಸಮ್ಮ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್​ನಲ್ಲಿದ್ದವರು ಗೊಬ್ಬರು (ಕೆ) ಗ್ರಾಮದಿಂದ ಬುಲೆಟ್​ನಲ್ಲಿ ಮಹಾರಾಷ್ಟ್ರಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ಬಂಕಲಗಾ ಬಳಿ ಎಮ್ಮೆಗೆ ಬುಲೆಟ್ ಡಿಕ್ಕಿ ಹೊಡೆದಿದೆ. ಬೈಕ್ ಅಪ್ಪಳಿಸಿದ ರಭಸಕ್ಕೆ ಎಮ್ಮೆ ಸ್ಥಳದಲ್ಲೇ ಸಾವಿಗೀಡಾಗಿದೆ. ಗಾಯಾಳುಗಳನ್ನ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net