ಕ್ರೀಡಾ ವಿಶ್ಲೇಷಕಿಯನ್ನು ವರಿಸಲಿದ್ದಾರೆ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ..?

blank

ಬೆಂಗಳೂರು: ಭಾರತ ತಂಡದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಹಾಗೂ ಕ್ರೀಡಾ ವಿಶ್ಲೇಷಕಿ, ನಿರೂಪಕಿ ಸಂಜನಾ ಗಣೇಶನ್ ಜೋಡಿ ಮಾರ್ಚ್ 14 ಮತ್ತು 15 ರಂದು ಗೋವಾದಲ್ಲಿ ಹಸೆಮಣೆ ಏರಲಿದೆ ಎಂದು ವರದಿಯಾಗಿದೆ. ಈ ಮೂಲಕ ಬುಮ್ರಾ ಮದುವೆಯಾಗುವ ಹುಡುಗಿ ಕುರಿತು ಹಲವು ದಿನಗಳಿಂದ ಹರಿದಾಡುತ್ತಿದ್ದ ಗಾಳಿಗೆ ಸುದ್ದಿಗೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. 27 ವರ್ಷದ ಬುಮ್ರಾ ಮದುವೆ ಸಿದ್ಧತೆಗಾಗಿಯೇ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಿಂದ ಬಿಡುವು ಪಡೆದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವಿಜಯ್ ಹಜಾರೆ ಟ್ರೋಫಿಯಲ್ಲಿ ಕೇರಳ ತಂಡವನ್ನು ಮಣಿಸಿ ಸೆಮೀಸ್ ಗೇರಿದ ಕರ್ನಾಟಕ ತಂಡ 

ಕ್ರೀಡಾ ವಾಹಿನಿ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ನಿರೂಪಕಿಯಾಗಿರುವ ಸಂಜನಾ ಗಣೇಶನ್, 2014ರ ಮಿಸ್ ಇಂಡಿಯಾದ ಫೈನಲಿಸ್ಟ್ ಆಗಿದ್ದಾರೆ. 28 ವರ್ಷದ ಸಂಜನಾ, ಸ್ಟಾರ್ ಸ್ಪೋರ್ಟ್ಸ್ ಅಲ್ಲದೆ, ಹಲವು ಖಾಸಗಿ ಚಾನೆಲ್‌ಗಳಲ್ಲೂ ಕಾರ್ಯಕ್ರಮ ನಿರೂಪಿಸುತ್ತಿದ್ದಾರೆ. ಐಪಿಎಲ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ವೇಳೆ ತಜ್ಞರೊಂದಿಗೆ ವಿಶ್ಲೇಷಣೆ ಮಾಡಿ, ಮೈದಾನದಿಂದ ವರದಿ ಮಾಡಿದ್ದಾರೆ.

ಇದನ್ನೂ ಓದಿ: ಶಾಹಿದ್ ಆಫ್ರಿದಿ ಮಗಳಿಗೆ ಶಾದಿ ಬಾಗ್ಯ: ಪಾಕ್ ಕ್ರಿಕೆಟ್ ತಂಡದ ಆಟಗಾರನೇ ವರ

ಕ್ರೀಡಾ ವಿಶ್ಲೇಷಕಿಯನ್ನು ವರಿಸಲಿದ್ದಾರೆ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ..?ಕೋವಿಡ್-19 ಮಾರ್ಗಸೂಚಿಯಿಂದಾಗಿ ಎರಡು ಕುಟುಂಬದ ಸದಸ್ಯರಷ್ಟೇ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಮ್ರಾ-ಸಂಜನಾ ಜೋಡಿಯ ವಿವಾಹದ ಕುರಿತು ಎರಡು ಕುಟುಂಬ ಸದಸ್ಯರು ಇನ್ನು ಖಚಿತಪಡಿಸಿಲ್ಲ. ಇದಕ್ಕೂ ಮೊದಲು ಬುಮ್ರಾ ತೆಲುಗು ನಟಿ ಅನುಪಮಾ ಪರಮೇಶ್ವರನ್ ಅವರನ್ನು ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ನಟಿ ತಾಯಿಯೇ ಈ ವಿಷಯವನ್ನು ತಳ್ಳಿಹಾಕಿದ್ದರು.

ಎರಡನೇ ಮಗುವಿನ ಫೋಟೊ ರಿವಿಲ್ ಮಾಡಿದ ಕರೀನಾ ಕಪೂರ್

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…