ಬೆಂಗಳೂರು: ಬೆನ್ನು ನೋವಿನ ಸಮಸ್ಯೆಯಿಂದ ಇನ್ನೂ ಸಂಪೂರ್ಣ ಚೇತರಿಕೆ ಕಾಣದಿರುವ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ.
ಫೆ.19ರಿಂದ ನಡೆಯಲಿರುವ ಟೂರ್ನಿಗೆ ಬಿಸಿಸಿಐ ಈ ಹಿಂದೆ ಪ್ರಕಟಿಸಿದ್ದ ಭಾರತ ತಂಡದಲ್ಲಿ ಬುಧವಾರ 2 ಬದಲಾವಣೆಗಳನ್ನು ಮಾಡಿದೆ. ಬುಮ್ರಾ ಬದಲಿಗೆ ಯುವವೇಗಿ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಎಡಗೈ ಆರಂಭಿಕ ಯಶಸ್ವಿ ಜೈಸ್ವಾಲ್ರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಬದಲಿಗೆ 5ನೇ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಸ್ಥಾನ ಕಲ್ಪಿಸಲಾಗಿದೆ.
ಉಳಿದಂತೆ 15 ಆಟಗಾರರ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಜೈಸ್ವಾಲ್, ಮೊಹಮದ್ ಸಿರಾಜ್ ಮತ್ತು ಶಿವಂ ದುಬೆ ಮೀಸಲು ಆಟಗಾರರಾಗಿ ತಂಡದೊಂದಿಗೆ ದುಬೈಗೆ ಪ್ರಯಾಣಿಸಲಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮ (ನಾಯಕ), ಶುಭಮಾನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ರಿಷಭ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮದ್ ಶಮಿ, ಅರ್ಷದೀಪ್ ಸಿಂಗ್.
ಟಿ20 ಲೀಗ್ಗಳಲ್ಲಿ ಹಾಲಿ ವರ್ಷ ಹೊಸ ತಂಡಗಳ ಗೆಲುವಿನ ಟ್ರೆಂಡ್! ಐಪಿಎಲ್ನಲ್ಲೂ ಮುಂದುವರಿಯುತ್ತಾ?