ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ!

1 Min Read
ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ!

ರಾಂಚಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ(ಮೇ 6) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ.. ಬಾಲಕ ಸಾವು

2023 ರ ಫೆಬ್ರವರಿಯಲ್ಲಿ ಜಾರಿ ನಿರ್ದೇಶನಾಲಯ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಎಂಬಾತನನ್ನು ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಬಂಧಿಸಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆ ದಾಳಿ ಮಾಡಿದೆ. ಇನ್ನು ಇಡಿ ಅಂದಾಜಿಸಿರುವ ಪ್ರಕಾರ ಪತ್ತೆಯಾಗಿರುವ ಹಣ 25 ಕೋಟಿ ರೂ. ಗೂ ಅಧಿಕ ಮೊತ್ತವಾಗಿದೆ ಎಂದು ಇಡಿ ಹೇಳಿದೆ.

ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ

See also  ಯತ್ನಾಳ ಶಾಸಕರಾಗಿರುವವರೆಗೂ ವಿಮಾನ ನಿಲ್ದಾಣ ಆಗದು
Share This Article