ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

mng-24aug-bunts hostel
Published on



ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 18ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೆಲ್‌ನ ಗೀತಾ.ಎಸ್.ಎಂ.ಶೆಟ್ಟಿ ಸಭಾ
ಭವನದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ,ಎರಡು ದಶಕದ ಹಿಂದೆ ಆರಂಭಗೊಂಡ ಬಂಟ್ಸ್ ಹಾಸ್ಟೆಲ್‌ನ ಗಣೇಶೋತ್ಸವ ಸಹಕಾರದಿಂದ ಜಿಲ್ಲೆಯ ಮಾದರಿ ಗಣೇಶೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿಯ ಗಣೇಶೋತ್ಸವ ಸೆ.7ರಿಂದ 9ರವರೆಗೆ ಶೃದ್ಧಾ ಭಕ್ತಿಯಿಂದ ನೆರವೇರಲಿದೆ ಎಂದರು.
ಸಿದ್ದಿ ವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ, ಕ್ರೀಡಾ ಸಮಿತಿಯ ಸಂಘಟಕಿ ನಿವೇದಿತಾ. ಎನ್.ಶೆಟ್ಟಿ , ಸಮಿತಿಯ ಸಂಚಾಲಕರಾದ ಅಶ್ವತ್ಥಾಮ ಹೆಗ್ಡೆ , ಸಂತೋಷ್ ಶೆಟ್ಟಿ ಶೆಡ್ಡೆ ಅವರು 3 ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮಗಳ ವಿವರ ನೀಡಿದರು.
ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ,ಉಪಾಧ್ಯಕ್ಷ ಹೇಮಾನಾಥ ಶೆಟ್ಟಿ ಕಾವು, ಕೋಶಾಧಿಕಾರಿ ಸಿಎ ರಾಮಮೋಹನ ರೈ, ಜತೆ ಕಾರ್ಯದರ್ಶಿ ಸಂಪಿಗೆದಡಿ ಸಂಜೀವ ಶೆಟ್ಟಿ, ಟ್ರಸ್ಟಿ ರವಿ ಶೆಟ್ಟಿ ನಿಟ್ಟೆಗುತ್ತು, ಉತ್ಸವ ಸಮಿತಿಯ ಸಂಚಾಲಕ ಮನೀಶ್ ರೈ ಉಪಸ್ಥಿತರಿದ್ದರು. ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಕೃಷ್ಣಪ್ರಸಾದ್ ರೈ ಸ್ವಾಗತಿಸಿದರು. ಮಾತೃ ಸಂಘದ ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ವಂದಿಸಿದರು. ಗಣೇಶೋತ್ಸವ ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net