More

    ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾಮರಸ್ಯ ಬೆಳೆಯಬೇಕು: ಪುಣೆಯಲ್ಲಿ ಸಿಎಂ ಆಶಯ

    ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ-ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಬಹಳಷ್ಟು ಸಾಧನೆ ಸಾಧ್ಯವಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

    ಪುಣೆಯಲ್ಲಿ ಶನಿವಾರ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ. ಶೆಟ್ಟಿ ಅವರ ಸಮಾಜ ಕಲ್ಯಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಪುಣೆಯಲ್ಲಿ ಕನ್ನಡಿಗರು ಹೆಮ್ಮೆ ಪಡುವ ಸಾಧನೆ ಮಾಡಿದ್ದಾರೆ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವ ರಾಜ್ಯ. ಅದೇ ರೀತಿ ಕನ್ನಡಿಗರ ಬಗ್ಗೆ ಗೌರವವಿರುವ ರಾಜ್ಯ. ನಿಮ್ಮ ಸಂಬಂಧ ಕನ್ನಡದ ಸಂಸ್ಕೃತಿ, ಭಾವನೆ, ಬೆಳವಣಿಗೆಗೆ ನಿರಂತರವಾಗಿ ಇರಲಿ. ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಕೆಲಸವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

    21ನೇ ಶತಮಾನ ಜ್ಞಾನದ ಕಾಲ. ಮುಂದಿನ ಪೀಳಿಗೆ ಜ್ಞಾನ ಪಡೆಯಬೇಕು. ಜ್ಞಾನದಲ್ಲಿಯೂ ಬಂಟರು ಕಡಿಮೆ ಇಲ್ಲ. ಬಂಟರ ಸಮಾಜಕ್ಕೆ ಕೀರ್ತಿ, ಕಿರೀಟ ಸಿಗುತ್ತದೆ. ನಿಮ್ಮ ಸಂಘದ ಚಟುವಟಿಕೆಗಳಿಗೆ ಸರ್ಕಾರದ ವತಿಯಿಂದ ಅಗತ್ಯ ಸಹಾಯ ಸಹಕಾರ ನೀಡಲಾಗುವುದು. ಪಂಡರಾಪುರಕ್ಕೆ ಈ ವರ್ಷ 5 ಕೋಟಿ ರೂ.ಗಳನ್ನು ನೀಡಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ. ಕನ್ನಡಿಗರು ಹೋಗುವ ಕಡೆಗಳಲ್ಲಿ ಸಹಾಯ ಹಸ್ತ ಚಾಚುತ್ತಿದ್ದೇವೆ ಎಂದರು.

    ವಿದ್ಯೆ, ತಂತ್ರಜ್ಞಾನ, ಸಂಸ್ಕೃತಿ ಕಲಿತಿದ್ದೇವೆ. ಅತ್ಯಂತ ಸುಸಂಸ್ಕೃತ ಊರು ಪುಣೆ. ಇಲ್ಲಿ ಬಂದು ಯಶಸ್ವಿಯಾಗಿರುವುದು ಶ್ಲಾಘನೀಯ. ಬೆಂಗಳೂರಿನಲ್ಲಿ ಇದಕ್ಕಿಂತ ಚೆನ್ನಾಗಿರುವ ಬಂಟರ ಸಂಘವನ್ನು ಕಟ್ಟಬೇಕು. ಎಲ್ಲಿಗೆ ಹೋದರೂ ಸಮಾಜ ಸೇವೆ ಮಾಡಿಕೊಂಡು ಬಂದಿದ್ದೀರಿ. ಬಂಟರ ಸಂಘ ನೂರಾರು ವರ್ಷ ಬಾಳಬೇಕು, ಬೆಳೆಯಬೇಕು ಎಂದು ಕರೆಕೊಟ್ಟರು.

    ಈ ವರ್ಷ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶಭಕ್ತಿಯನ್ನು ಪುನರುಜ್ಜೀವನಗೊಳಿಸಲು ಹರ್​ ಘರ್​ ತಿರಂಗಾ ಅಭಿಯಾನ ಪ್ರಾರಂಭಿಸಿದ್ದಾರೆ. ಕರ್ನಾಟಕದಲ್ಲಿ 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಇಡೀ ದೇಶದ ತುಂಬಾ ದೇಶಭಕ್ತಿಯ ಬಗ್ಗೆ ಜಾಗೃತಿ ಮೂಡುತ್ತಿದೆ. ಇದರ ಅವಶ್ಯಕತೆ ಇದೆ. ದೇಶದ ಏಕತೆ, ಅಖಂಡತೆ ಇದ್ದಾಗ ಮಾತ್ರ ದೇಶ ಕಟ್ಟಲು ಸಾಧ್ಯ. ದೇಶ ಮೊದಲು ಎನ್ನುವ ಭಾವ ಇದ್ದ ದೇಶಕ್ಕೆ ಸೋಲು ಎನ್ನುವುದು ಇರುವುದಿಲ್ಲ. ಭಾರತದ 130 ಕೋಟಿ ಜನ ಸಂಖ್ಯೆ ಎದ್ದು ನಿಂತರೆ ಇಡೀ ಜಗತ್ತೇ ಅಲ್ಲಾಡಿಬಿಡುತ್ತದೆ ಎಂದರು.

    ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾಮರಸ್ಯ ಬೆಳೆಯಬೇಕು: ಪುಣೆಯಲ್ಲಿ ಸಿಎಂ ಆಶಯ

    ಬಂಟರು ಎಂಟೆದೆ ಇದೆ ಎಂದು ಗರ್ವ ತೋರಿಸುವವರಲ್ಲ. ನೀವು ದೇಶದ ಉದ್ದಗಲಕ್ಕೆ ಕಾಶ್ಮೀರದಿಂದ ಕನ್ಯಾಕುಮಾರಿ, ದಿಲ್ಲಿ ಎಲ್ಲೇ ಹೋದರೂ ಗೌರವವಿದೆ. ಬಂಟರಾಗಬೇಕಾದರೆ ಅವರಿಗೆ ಎಂಟೆದೆ ಇರಬೇಕು. ಅದು ನಿಮ್ಮ ರಕ್ತದ ಕಣ ಕಣದಲ್ಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಾಹಸಕ್ಕೆ ಕೈಹಾಕುವವರು ನೀವು. ವ್ಯಾಪಾರದ ಇಕೋ ಸಿಸ್ಟಮ್​ ಸೃಷ್ಟಿಸುತ್ತೀರಿ. ಯಾರಿಗೆ ಸಾಧ್ಯವಿಲ್ಲ ಅದನ್ನು ಮಾಡಿ ತೋರಿಸಿರುವವರು ಬಂಟರು ಎಂದು ಬೊಮ್ಮಾಯಿ ಹೇಳಿದರು.

    ಎಂಟೆದೆ ಇದೆ ಎಂದು ಗರ್ವ ತೋರಿಸುವವರಲ್ಲ. ಶಕ್ತಿ ಶಾಲಿಗಳಾದಂತೆಯೇ ಪ್ರೀತಿ ವಿಶ್ವಾಸ ತೋರುವ ಜನ. ಪುಣೆಯಲ್ಲಿ ಕನ್ನಡಿಗರು ಬಹಳಷ್ಟು ಜನರಿದ್ದಾರೆ. ಕನ್ನಡದ ಗುರುತು ಬಂಟರ ಸಂಘದಿಂದ ಇದೆ. ಹೊರಗಿನ ರಾಜ್ಯಕ್ಕೆ ಬಂದು ನೆಲೆಸಿದಾಗ ನಮ್ಮ ಊರಿನ ಬಗ್ಗೆ ಇನ್ನೂ ಹೆಚ್ವಿನ ಅಭಿಮಾನ ಬೆಳೆಯುತ್ತದೆ. ದೂರವಾದಷ್ಟೂ ಊರು ಮನಸ್ಸಿಗೆ ಹತ್ತಿರವಾಗುತ್ತದೆ ಎಂದರು.

    ಸಾವರ್ಕರ್​ ಫೋಟೋ ವಿರುದ್ಧ ಎಸ್​ಡಿಪಿಐ ಆಕ್ರೋಶ; ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು

    ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಎಬಿವಿಪಿ ಧ್ವಜ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts