20.4 C
Bengaluru
Sunday, January 19, 2020

ಕಾರು ಮತ್ತು ಖಾಸಗಿ ಪ್ರವಾಸಿ ಬಸ್ ಡಿಕ್ಕಿ: ವಿದ್ಯಾರ್ಥಿಗಳ ಸಹಿತ 17 ಮಂದಿಗೆ ಗಾಯ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

 ಬೆಳ್ತಂಗಡಿ/ಉಪ್ಪಿನಂಗಡಿ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ತಿರುವಿನಲ್ಲಿ ಕಾರು ಮತ್ತು ಬೆಳಗಾವಿ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳ ಪ್ರವಾಸದ ಬಸ್ ನಡುವೆ ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ 13 ವಿದ್ಯಾರ್ಥಿಗಳು ಹಾಗೂ ಇಬ್ಬರು ಅಧ್ಯಾಪಕರು, ಬಸ್ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಶ್ರೀ ಗುರುಸಿದ್ದ ಮಹಾಸ್ವಾಮಿಗಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ 3 ಖಾಸಗಿ ಬಸ್‌ಗಳ ಪೈಕಿ ಒಂದು ಬಸ್ ಧರ್ಮಸ್ಥಳದಿಂದ ಬೇಲೂರಿಗೆ ಹೋಗುವ ವೇಳೆ ಘಟನೆ ಸಂಭವಿಸಿದೆ. ಕೊಕ್ಕಡದ ಕಾಪಿನಬಾಗಿಲು ಬಳಿ ತಿರುವಿನಲ್ಲಿ ಎದುರು ಬದಿಯಿಂದ ರಾಂಗ್ ಸೈಡ್‌ನಲ್ಲಿ ಬಂದ ಕಾರೊಂದನ್ನು ತಪ್ಪಿಸುವ ಸಲುವಾಗಿ ಎಡಕ್ಕೆ ತಿರುಗಿಸಿ ಮುಂಭಾಗದಲ್ಲಿದ್ದ ಅಂಗಡಿಗೆ ನುಗ್ಗುವ ಬದಲು ಮತ್ತೆ ಬಲಬದಿಗೆ ತಿರುಗಿಸಿಕೊಂಡಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನ ಬಾನೆಟ್ ಮೇಲೆ ಬಸ್ ಬಿದ್ದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ.

ವಿದ್ಯಾರ್ಥಿಗಳಾದ ಐಶ್ವರ್ಯ(13), ಚೈತ್ರಾಶ್ರೀ(12), ಸಂಜನಾ ರಾಜು(12), ಸಾಕ್ಷಿ(12), ಅನುರಾಧಾ(13), ಕಾವ್ಯಾ(13), ವರ್ಷಾ ಗಸ್ತಿ(11), ಶ್ರೇಯಾ(12 ), ಪೂಜಾ ಸತ್ಯಪ್ಪ(13), ಸಂಜನಾ(13), ನಯನಾ(14), ಸುಶಾಂತ್(13), ಬಾಲು(13) ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಆನಂದ ಅವಲಕ್ಕಿ, ಶಿಕ್ಷಕ ಬಿ.ಹೀರೇಮಠ ಮತ್ತು ಬಸ್ ಚಾಲಕ ರಮೇಶ್ ಪಾಟೀಲ್ ಗಾಯಗೊಂಡವರು. ಗಾಯಾಳುಗಳ ಪೈಕಿ ಶಿಕ್ಷಕ ಬಿ.ಹೀರೇಮಠ ಕೈ ಮುರಿದಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳ ಪೈಕಿ ಬಾಲು ಎಂಬಾತನ ಕೈ ಮುರಿದಿದ್ದು, ಚಾಲಕ ರಮೇಶ್ ಪಾಟೀಲ್ ಅವರ ತಲೆಗೆ ಸಣ್ಣ ಗಾಯಗಳಾಗಿದೆ. ಅಪಘಾತ ವೇಳೆ ತಮಿಳುನಾಡಿನ ಚಿತ್ತೂರು ಜಿಲ್ಲೆ ತಿರುಪತಿಯ ಕಾರು ಬಸ್‌ನಡಿಗೆ ಬಿದ್ದು ಚಾಲಕ ಪ್ರಸಾದ್(38) ಗಾಯಗೊಂಡಿದ್ದಾರೆ. ಗಾಯಗೊಂಡ 8 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಉಪನಿರೀಕ್ಷಕ ಈರಯ್ಯ, ಉಪ್ಪಿನಂಗಡಿ ಮತ್ತು ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆಯಲ್ಲಿದ್ದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಪ್ಪಿದ ಭಾರಿ ದುರಂತ: ಬಸ್ ಚಾಲಕನ ಪ್ರಸಂಗಾವಧಾನತೆಯಿಂದ ಬಸ್ ಪಲ್ಟಿಯಾದ ನಾಲ್ಕು ಅಡಿ ದೂರದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ಕಾರಣ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು, ಶಿಕ್ಷಕರು ದುರಂತದಿಂದ ಪಾರಾಗಿದ್ದಾರೆ. ಕಾರಿನ ಬಾನೆಟ್ ಮೇಲೆ ಬಸ್ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರ ಸಹಕಾರ: ಅಪಘಾತ ನಡೆದ ಸ್ಥಳದಲ್ಲೇ ಇದ್ದ ಗ್ಯಾರೇಜ್‌ನ ಹರೀಶ್ ಆಚಾರ್ಯ, ಸುರೇಂದ್ರ, ಸಾಬು ಮೋನು, ಶ್ರೀಕಾಂತ ಆಚಾರ್ಯ, ಯತೀಂದ್ರ ಶೆಟ್ಟಿ ಮತ್ತು ಇತರರು ಸೇರಿ ಬಸ್‌ನಲ್ಲಿ ಸಿಲುಕಿದ್ದ ಮಕ್ಕಳನ್ನು ಕೂಡಲೇ ಹೊರಗೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದರು. ಅಪಘಾತ ಬಗ್ಗೆ ಶಿಕ್ಷಕಿ ಎಸ್.ಸಿ.ತಪೆಲಿ ಎಂಬುವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸೌತಡ್ಕ ದೇಳದಲ್ಲಿ ಆಶ್ರಯ: ಮೂರು ಬಸ್‌ಗಳಲ್ಲಿ ಪ್ರವಾಸಕ್ಕೆ ಬಂದಿದ್ದ ಮಕ್ಕಳು, ಒಂದು ಬಸ್ ಅಪಘಾತಕ್ಕೀಡಾಗಿ ಕೆಲವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಪ್ರವಾಸ ಮುಂದುವರೆಸಲಾಗದೆ ಅತಂತ್ರರಾಗಿದ್ದರು. ಈ ವೇಳೆ ಸ್ಥಳೀಯರು ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಆಶ್ರಯ ಕಲ್ಪಿಸಿದ್ದರು. ದೇವಾಲಯದಲ್ಲಿ ಉಪಹಾರ, ಭೋಜನ ವ್ಯವಸ್ಥೆ ಕಲ್ಪಿಸಲಾಯಿತು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...