ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾಯ್ತು 90 ಜನರಿದ್ದ ಬಸ್​!

Bus Accident
Published on

ಚಾಮರಾಜನಗರ: ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾದ ಪ್ರಸಂಗವೊಂದು ನಡೆದಿದೆ. ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಚೈನ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ಇಲ್ಲಿನ ದೇವಸ್ಥಾನದಲ್ಲಿನ ರಥೋತ್ಸವಕ್ಕೆ ಬಂದಿದ್ದ ಭಕ್ತರನ್ನು ವಾಪಸ್ ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್​, ಮಾರ್ಗಮಧ್ಯೆ ಬೆಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬಳಿಕ ಮರವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.

90 ಮಂದಿ ಪ್ರಯಾಣಿಕರಿದ್ದ ಈ ಬಸ್​ ಅದೃಷ್ಟವಶಾತ್ ಅಂಥ ಗಂಭೀರ ಪರಿಣಾಮಕ್ಕೆ ಒಳಗಾಗಿಲ್ಲ. ಅದಾಗ್ಯೂ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಾದ ಪದ್ಮಮ್ಮ, ವೆಂಕಟಲಕ್ಷ್ಮಮ್ಮ ಅವರನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net