18.1 C
Bangalore
Saturday, December 7, 2019

ಪರ್ವಿುಟ್ ರಹಿತ ಖಾಸಗಿ ಬಸ್​ವಶ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಮಂಡ್ಯ/ಕೆ.ಆರ್.ಪೇಟೆ: ಕನಗನಮರಡಿಯಲ್ಲಿ ಬಸ್ ಅಪಘಾತ ಸಂಭವಿಸಿ 30 ಜನರು ಮೃತಪಟ್ಟ ಮೂರೇ ದಿನದಲ್ಲಿ ಮತ್ತೆ ಖಾಸಗಿ ಬಸ್ ಅಕ್ರಮ ಸಂಚಾರ ಬೆಳಕಿಗೆ ಬಂದಿದೆ. ಡಕೋಟಾ ಬಸ್​ಗೂ

ಫಿಟ್​ನೆಸ್ ಸರ್ಟಿಫಿಕೇಟ್ ನೀಡಿದ್ದರಿಂದ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳ ಮೇಲೆ ನಿಗಾವಹಿಸಿ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಹೀಗಾಗಿ ಮಂಗಳವಾರ ತಪಾಸಣೆ ವೇಳೆ ಖಾಸಗಿ ಬಸ್ ಪರ್ವಿುಟ್ ಇಲ್ಲದೆ ಸಂಚರಿಸುತ್ತಿರುವುದು ಪತ್ತೆಯಾಗಿದೆ.

ಕೆ.ಆರ್.ಪೇಟೆ ಎಂಡಿಸಿಸಿ ಬ್ಯಾಂಕ್ ಎದುರು ನಿಂತಿದ್ದ ನ್ಯಾಷನಲ್ ಟ್ರಾವೆಲ್ಸ್​ನ ಬಸ್ ಪರಿಶೀಲಿಸಿದಾಗ ಸಚಿವ ಜಮೀರ್ ಅಹಮದ್ ಚಿಕ್ಕಪ್ಪ ಅತಾವುಲ್ಲಾ ಎಂಬುವರಿಗೆ ಸೇರಿದ ಆ ಬಸ್​ಗೆ ಪರ್ವಿುಟ್ ಇರದ್ದರಿಂದ ಪೊಲೀಸರು ಬಸ್ ವಶಕ್ಕೆ ಪಡೆದಿದ್ದಾರೆ. ಅದು ಬೆಂಗಳೂರು ಟು ಮೇಲುಕೋಟೆವರೆಗೆ ಸಂಚರಿಸಲಷ್ಟೇ ಪರ್ವಿುಟ್ ಹೊಂದಿದ್ದು, ಕೆ.ಆರ್.ಪೇಟೆಗೆ ಸಂಚರಿಸಲು ಪರ್ವಿುಟ್ ಹೊಂದಿರಲಿಲ್ಲ. ಚಾಲಕ ಹರೀಶ್, ನಿರ್ವಾಹಕ ವೆಂಕಟೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಡಕೋಟಾ ಬಸ್​ಗಳ ಸಂಚಾರ: ಮಂಡ್ಯದ ಆರ್​ಟಿಒ ಕಚೇರಿಯಲ್ಲಿ ಡಕೋಟಾ ಬಸ್-ಟೆಂಪೊಗಳಿಗೂ ಫಿಟ್​ನೆಸ್ ಸರ್ಟಿಫಿಕೆಟ್ ಸಿಗುತ್ತದೆ. ಡಿಎಲ್ ಸೇರಿ ಯಾವುದೇ ದಾಖಲೆಗಳು ಬೇಕಾದಲ್ಲಿ ವಾಹನ/ವ್ಯಕ್ತಿಯ ಅರ್ಹತೆಗಿಂತ ಇಲ್ಲಿ ಹಣ ಮುಖ್ಯ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ 450ಕ್ಕೂ ಹೆಚ್ಚು ಖಾಸಗಿ ಬಸ್​ಗಳಿದ್ದು, ಈ ಪೈಕಿ 100ಕ್ಕೂ ಹೆಚ್ಚು ಬಸ್​ಗಳಿಗೆ ಸಮರ್ಪಕ ದಾಖಲೆಗಳಿಲ್ಲ.

115ಕ್ಕೂ ಹೆಚ್ಚು ಸಾವು: 1976ರ ಮಾ.5ರಂದು ದುದ್ದ ಬಳಿ ಖಾಸಗಿ ಬಸ್ ನಾಲೆಗೆ ಉರುಳಿ 115ಕ್ಕೂ ಹೆಚ್ಚು ಜನ ಜಲಸಮಾಧಿಯಾಗಿದ್ದರು. 15 ವರ್ಷಗಳ ಹಿಂದೆ ಕಾಳೇನಹಳ್ಳಿ ಬಳಿ ಬಸ್-ಟ್ರಕ್ ಡಿಕ್ಕಿಯಾಗಿ 14 ಜನ, 2011ರಲ್ಲಿ ಹೊಳಲು ಬಳಿ 5, 2013ರ ಡಿ.29ರಂದು ಸಾತನೂರು ಬಳಿ 5 ಜನ ಮೃತಪಟ್ಟಿದ್ದರು. ಅಪಘಾತಗಳ ಬಳಿಕ ಪರಿಹಾರ ಘೊಷಿಸುವುದನ್ನು ಹೊರತುಪಡಿಸಿದರೆ ಸಮಸ್ಯೆ ನಿವಾರಣೆಗೆ ಯತ್ನಿಸದಿರುವುದೇ ಶನಿವಾರ ಕನಗನಮರಡಿ ಬಳಿ 30 ಜನರ ಜಲಸಮಾಧಿಗೆ ಕಾರಣ ಎಂದರೆ ತಪ್ಪಾಗದು. ಇನ್ನು ಖಾಸಗಿ ಬಸ್ ಮಾಲೀಕರ ಲಾಬಿ-ದೌರ್ಜನ್ಯದಿಂದಾಗಿ ಹಲವೆಡೆ ಸರ್ಕಾರಿ ಬಸ್​ಗಳು ಕಾಲಿಡಲಾಗುತ್ತಿಲ್ಲ. ಸ್ಥಳೀಯರ ಒತ್ತಡದ ಮೇರೆಗೆ ಬಸ್​ಗಳನ್ನು ಬಿಟ್ಟರೂ ಖಾಸಗಿಯವರ ಲಾಬಿ ಎದುರು ಆ ಬಸ್​ಗಳು 6 ತಿಂಗಳು ಸಂಚರಿಸಿದರೆ ಅದೇ ದೊಡ್ಡ ಸಾಧನೆ ಎನ್ನುತ್ತಾರೆ ಸ್ಥಳೀಯರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...