ಬಸ್-ಆಟೋ ರಿಕ್ಷಾ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ದುರಂತ ಸಾವು | UP

UP
Published on

UP: ಆಟೋ ರಿಕ್ಷಾಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮಂಗಳವಾರ (ಮೇ.27) ಸಂಜೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಖಲೀಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಂಟೆ ಗ್ರಾಮದ ಬಳಿಯ ಮುಂಡೆರ್ವಾ-ಕಾಂಟರ್ ರಸ್ತೆಯಲ್ಲಿ ರಾತ್ರಿ 7.30 ರ ಸುಮಾರಿಗೆ ಈ ಅಪಘಾತ ಸಂಭವಿಸಿ, ಮೂರು ಜನರು ಸ್ಥಳದಲ್ಲೇ ಸಾವನ್ನಪ್ಪಿದರು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಪೊಲೀಸ್​​ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮೃತರನ್ನು ಸರ್ವಜೀತ್ (32), ಅವರ ಎರಡು ವರ್ಷದ ಮಗ ಅರ್ಜುನ್, ಭಿಖ್ನಾ ದೇವಿ (45) ಮತ್ತು ಮುರತಿ ದೇವಿ (35) ಎಂದು ಗುರುತಿಸಲಾಗಿದೆ. ಮುರತಿ ದೇವಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬಸ್ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿಯಾಗಿದ್ದರು ಆದರೆ ನಂತರ ಅವರನ್ನು ಬಂಧಿಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ, ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net