ಚುನಾವಣಾ ಸಿಬ್ಬಂದಿ ತೆರಳುತ್ತಿದ್ದ ಬಸ್ ಪಲ್ಟಿ: ಸುಮಾರು 8-10 ಜನರಿಗೆ ಗಂಭೀರ ಗಾಯ

vijaypura bus accident
Published on

ವಿಜಯಪುರ: ಚುನಾವಣಾ ತರಬೇತಿಗೆ ಸಿಬ್ಬಂದಿ ಹೊರಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳದಿಂದ ಸಿಂದಗಿಗೆ ತೆರಳುತ್ತಿದ್ದ ವೇಳೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ಘಟನೆ‌ ನಡೆದಿದೆ.

ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಸುಮಾರು 8-10 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್ ಆರ್‌ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net