More

  ಯಾತ್ರಾರ್ಥಿಗಳಿದ್ದ ಬಸ್​ ಪಲ್ಟಿ​; ಓರ್ವ ಪ್ರಯಾಣಿಕ ಮೃತ್ಯು, ಹಲವರಿಗೆ ಗಾಯ

  ಜಮ್ಮು-ಕಾಶ್ಮೀರ: ವೈಷ್ಣೋದೇವಿ ದರ್ಶನ ಮುಗಿಸಿ ವಾಪಸ್​ ಆಗುವ ವೇಳೆ ಯಾತ್ರಾರ್ಥಿಗಳಿದ್ದ ಬಸ್​ ಪಲ್ಟಿಯಾಗಿ ಒಬ್ಬರು ಮೃತಪಟ್ಟು, 23 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ರಸೋಯಿ ಜಿಲ್ಲೆಯಲ್ಲಿ ನಡೆದಿದೆ.

  ಯಾತ್ರಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ಕತ್ರಾದಿಂದ ಜಮ್ಮು ಕಡೆಗೆ ವಾಪಸ್​ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

  ಕತ್ರಾ ಹೊರವಲಯದ ಮುರ್ರೆ ಬಳಿ ಅವಘಡ ಸಂಭವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts