

ಲಖನೌ: ಚಲಿಸುವ ಬಸ್ನಲ್ಲಿಯೇ ನಿರ್ವಾಹಕನೋರ್ವ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಪ್ರಯಾಣಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಘಟನೆಯೂ ಹತ್ರಾಸ್ ಹಾಗೂ ಲಖನೌ ನಡುವೆ ಸಂಚರಿಸುವ ಬಸ್ನಲ್ಲಿ ನಡೆದಿದ್ದು, ಚಾಲಕ ಹಾಗೂ ನಿರ್ವಾಹಕನನ್ನು ಸೇವೆಯಿಂದ ಅಮಾನತು ಮಾಡಿ ಉತ್ತರಪ್ರದೇಶದ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಕಂಡಕ್ಟರ್ ಚಲಿಸುವ ಬಸ್ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡು ಬರುತ್ತದೆ. ಸುಮಾರು ಘಂಟೆಗಳಿಂದ ನಿರ್ವಾಹಕನ ವರ್ತನೆಯನ್ನು ಗಮನಿಸಿದ ಪ್ರಯಾಣಿಕರು ಆತನ ಬಳಿ ಹೋಗಿ ಪರಿಶೀಲಿಸಿದಾಗ ಆತ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡು ಬಂದಿದೆ.
ಈ ಬಗ್ಗೆ ಪ್ರಶ್ನಿಸಿದಾಗ ಆತ ಪ್ರಯಾಣಿಕರ ಮೊಬೈಲ್ ಪೋನ್ ಕಸಿದುಕೊಳ್ಳಲು ಮುಂದಾಗಿದ್ದು, ಇದು ಕೆಲಕಾಲ ವಾಗ್ವಾದಕ್ಕೆ ಕಾರಣವಾಗಿದೆ. ಬಳಿಕ ಪ್ರಯಾಣಿಕರೊಬ್ಬರು ಆತ ಒಂದು ಘಂಟೆಗೂ ಹೆಚ್ಚಿನ ಕಾಲ ಆತ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದಾಗಿ ದೂರುತ್ತಿರುವುದು ಕಂಡು ಬರುತ್ತದೆ.
ಮೊದಲಿಗೆ ಪ್ರಯಾಣಿಕರು ಈ ಬಗ್ಗೆ ದೂರು ಕೊಡಲು ಮುಂದಾಗಿದ್ದರು ಬಳಿಕ ನಿರ್ವಾಹಕನಿಗೆ ಬುದ್ದಿವಾದ ಹೇಳಿ ಹೊರಟು ಹೋಗಿದ್ದರು. ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಉತ್ತರಪ್ರದೇಶ ಸಾರಿಗೆ ಇಲಾಖೆ ನಿರ್ವಾಹಕ ಹಾಗೂ ಚಾಲಕನ ವಿರುದ್ಧ ಕ್ರಮ ಜರುಗಿಸಿ ಆದೇಶ ಹೊರಡಿಸಿದೆ.