

ಮಂಡ್ಯ: ಕೆಲವರು ದಯಾಮರಣ ಕೋರಿ ಅರ್ಜಿ ಸಲ್ಲಿಸುವುದಿದೆ. ಆದರೆ ಇಲ್ಲೊಬ್ಬರು ಆತ್ಮಹತ್ಯೆಗೆ ಅನುಮತಿ ಕೋರಿ ಮನವಿ ಸಲ್ಲಿಸಿರುವ ಪ್ರಕರಣವೊಂದು ನಡೆದಿದೆ. ಸರ್ಕಾರಿ ಬಸ್ ಕಂಡಕ್ಟರ್ ಒಬ್ಬರು ತಮ್ಮ ಸಂಸ್ಥೆಯ ಮುಖ್ಯಸ್ಥರಿಗೆ ಇಂಥದ್ದೊಂದು ಮನವಿ ಸಲ್ಲಿಸಿದ್ದಾರೆ.
ಜಗದೀಶ್ ಎಂಬವರು ಹೀಗೆ ಮನವಿ ಮಾಡಿಕೊಂಡ ಚಾಲಕ-ಕಂ-ನಿರ್ವಾಹಕ. ಇವರು ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಲ್ಲಿ ಈ ಮನವಿ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಇವರು ಆ ನಿಟ್ಟಿನಲ್ಲಿ ಪತ್ರವೊಂದನ್ನು ಬರೆದಿಟ್ಟಿದ್ದಾರೆ.
ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್ ಅವರಲ್ಲಿ ಕೇಳಿದೆ. ನಿಯಂತ್ರಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನು ಕೇಳಿದಾಗ ಕೃಷಿ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಎಂದರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪವೆಂದು ತಿಳಿಯದೆ ನೊಂದಿದ್ದೇನೆ. ಈ ಒತ್ತಡ-ಅವಮಾನವನ್ನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡುವಂತೆ ಪತ್ರ ಬರೆದಿರುವ ಅವರು, ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ ಎಂದೂ ಉಲ್ಲೇಖಿಸಿದ್ದಾರೆ.