More

    ಬಸ್ ಸಂಪರ್ಕವಿಲ್ಲದೆಡೆ ಟೆಂಟ್ ಶಾಲೆ

    ಬೆಳಗಾವಿ: ಬಸ್ ಸಂಪರ್ಕ ಇಲ್ಲದ ಪ್ರದೇಶಗಳಲ್ಲಿ ಟೆಂಟ್ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದರು. ಖಾನಾಪುರ ಬಿಇಒ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಸೈನ್ಸ್ ಪಾರ್ಕ್‌ಅನ್ನು ಸೋಮವಾರ ಉದ್ಘಾಟಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಶಾಲೆ- ಕಾಲೇಜು ತರಗತಿಗಳು ಪ್ರಾರಂಭವಾಗಿವೆ. ಖಾನಾಪುರ ತಾಲೂಕು ದಟ್ಟ ಅರಣ್ಯ ಪ್ರದೇಶವಾಗಿದೆ. ಮಕ್ಕಳಿಗೆ ಬಸ್ ಸೌಲಭ್ಯ ಒದಗಿಸಲು ಸಾರಿಗೆ ಸಚಿವರೊಂದಿಗೆ ಚರ್ಚಿಸಲಾಗಿದೆ. ಬಸ್ ಪಾಸ್ ಇನ್ನೂ ವಿತರಣೆ ಆಗಿಲ್ಲ. ಹಳೇ ಪಾಸ್‌ಗಳೇ ಹೊಸ ಪಾಸ್ ವಿತರಿಸುವವರೆಗೆ ಚಾಲ್ತಿಯಲ್ಲಿರುತ್ತವೆ ಎಂದರು.

    ಕಟ್ಟಡಗಳಿಗೆ ಪುನಶ್ಚೇತನ: ಐವತ್ತು ವರ್ಷ ಪೂರೈಸಿದ ಶಾಲಾ ಕಟ್ಟಡಗಳ ಪುನಃಶ್ಚೇತನಕ್ಕೆ ಯೋಜನೆ ರೂಪಿಸಲಾಗುವುದು. ಗಡಿಭಾಗದಲ್ಲಿ ಕನ್ನಡ ಶಾಲೆಗಳಲ್ಲಿ ಕನ್ನಡ ಕಲಿಕೆಗೆ ಆದ್ಯತೆ ನೀಡಲಾಗುವುದು. ಶಾಲೆಯಿಂದ ಹೊರಗುಳಿದ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯ ಒದಗಿಸಲಾಗುವುದು. ಈಗಾಗಲೇ ಆನ್‌ಲೈನ್ ತರಗತಿಗಳನ್ನು ಕೈಗೊಳ್ಳಲಾಗಿದೆ. ವಿದ್ಯಾಗಮ ಹಂತದಲ್ಲಿ ಮತ್ತೆ ಪಠ್ಯ ಬೋಧಿಸಲು ಶಿಕ್ಷಕರಿಗೆ ಸೂಚಿಸಲಾಗಿದೆ. ಗಡಿಭಾಗದ ಶಾಲೆಗಳು ಗಟ್ಟಿಯಾದರೆ ಕನ್ನಡ ಗಟ್ಟಿಯಾಗುತ್ತದೆ ಎಂದು ತಿಳಿಸಿದರು.

    ಅಂಗನವಾಡಿ ತೆರೆಯಲು ಕೇಂದ್ರ ಸರ್ಕಾರದ ಅನುಮತಿ: ಕಳೆದ ವರ್ಷ ಕರೊನಾದಿಂದಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ ತರಗತಿ ನಡೆಯದ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹ ಸಂಖ್ಯೆಯೂ ಹೆಚ್ಚಾಗಿದೆ. ಇಂತಹ ಸಮಸ್ಯೆಗಳ ಹಿನ್ನೆಲೆಯಲ್ಲಿ ಈಗ ರಾಜ್ಯದಲ್ಲಿ ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ಎಲ್ಲವನ್ನೂ ಗಮನಿಸುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದ್ದರಿಂದ ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿ ಇನ್ನುಳಿದ ತರಗತಿಗಳನ್ನು ಯಾವ ರೀತಿ ಪ್ರಾರಂಭಿಸಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

    ಈಗ 9, 10, 11, 12ನೇ ತರಗತಿಗಳನ್ನು ಪೂರ್ಣ ದಿನ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಜನವರಿ 1ರಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಅಷ್ಟೇ ಆರಂಭಿಸಿದ್ದೇವು. ಈ ಬಗ್ಗೆ ಆಕ್ಷೇಪ
    ಕೇಳಿಬಂದಿದ್ದರಿಂದ ಪ್ರಥಮ ಪಿಯುಸಿ, 9ನೇ ತರಗತಿ ಆರಂಭಿಸಿದ್ದೇವೆ. ಈಗ ಎಲ್ಲ ಕಡೆ 1ನೇ ತರಗತಿಯಿಂದ ಎಲ್ಲ ತರಗತಿ ಆರಂಭಿಸುವಂತೆ ಬೇಡಿಕೆ ಇದೆ ಎಂದರು. ಶಿಕ್ಷಣ ಇಲಾಖೆ ಆಯುಕ್ತ ಮೇ.ಸಿದ್ದಲಿಂಗಯ್ಯ ಹಿರೇಮಠ, ತಹಸೀಲ್ದಾರ್ ರೇಷ್ಮಾ ತಾಳಿಕೋಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts