More

    ಮಧ್ಯಪ್ರದೇಶ ಬಸ್ ದುರಂತ: 37 ಶವಗಳು ಕಾಲುವೆಯಿಂದ ಹೊರಕ್ಕೆ

    ಇಂದೋರ್: ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಮೃತಪಟ್ಟ 37 ಜನರ ಶವಗಳನ್ನು ನದಿ ಕಾಲುವೆಯಿಂದ ಹೊರಕ್ಕೆ ತೆಗೆಯಲಾಗಿದೆ.

    ಘಟನೆಯಲ್ಲಿ 38 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಮಾರು 57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ನೀರಿನಿಂದ ತುಂಬಿ ಹರಿಯುತ್ತಿದ್ದ ಕಾಲುವೆಯೊಂದಕ್ಕೆ ಉರುಳಿ ಬಿದ್ದಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿತ್ತು. ಈ ಸರ್ಕಾರಿ ಬಸ್ ಸಿದ್ದಿಯಿಂದ ಸತ್ನಾ ಕಡೆ ಹೊರಟಿತ್ತು. ಸಿದ್ದಿ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಕಾಲುವೆಗೆ ಉರುಳಿ ಬಿದ್ದಿದೆ.

    ಸದ್ಯದ ಮಾಹಿತಿ ಪ್ರಕಾರ ಘಟನೆಯಲ್ಲಿ 38 ಜನ ಮೃತಪಟ್ಟಿದ್ದು, 15 ಜನರನ್ನು ರಕ್ಷಿಸಲಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಅವರು, ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸಿದ್ದಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸ್ಥಳದಲ್ಲಿ ಸಾವು ನೋವು ಹೆಚ್ಚಾಗುವ ಸಂಭವವಿದ್ದು, ಪರಿಹಾರ ಕಾರ್ಯಾಚರಣೆ ಚುರುಕುಗೊಂಡಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

    VIDEO| ಜಲ್ಲಿಕಟ್ಟು ನೋಡಲು ಬಂದವನಿಗೆ ಗುದ್ದಿದ ಎತ್ತು! ಬೆಚ್ಚಿ ಬೀಳಿಸುತ್ತೆ ಈ ವಿಡಿಯೋ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts