

ತುಮಕೂರು: ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಜನ ಸಾವಿಗೀಡಾದ ಪ್ರಕರಣದ ಬೆನ್ನಿಗೇ ರಾಜ್ಯದಲ್ಲಿ ಇನ್ನೊಂದು ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.
ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಳುಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.