ಯಲ್ಲಾಪುರ Bus Overturned:ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿ 25 ಜನರು ಗಾಯಗೊಂಎ ಘಟನೆ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ.
ಯಲ್ಲಾಪುರದಿಂದ ಬೆಳಗಾವಿಗೆ ಹೊರಟಿದ್ದ ಬಸ್ ಕಣ್ಣಿಗೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಮರ ತುಂಡಾಗಿ ಬಿದ್ದಿದೆ.
Bus Overturned
ಬಸ್ ಚಾಲಕ ಬೆಳಗಾವಿಯ ರೋಣದ ಅಶೋಕ ಸಂಗಪ್ಪ ದೊಡ್ಡಣ್ಣನವರ್, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯಲ್ಲಾಪುರದ ಶಿಕ್ಷಕಿ ಭುವನೇಶ್ವರಿ ಹಾಗೂ ಛಾಯಾ ಎಂಬವರಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಉಳಿದ 22 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: https://www.vijayavani.net/virender-sehwag-and-wife-aarti-ahlawat-fight-in-car