ಕರ್ನಾಟಕ ಬಜೆಟ್ 2024: ದಶಕಗಳ ಕನಸು ನನಸು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

Siddaramaiah
Published on

ಬೆಂಗಳೂರು: ಗ್ರಾಮೀಣ ಪತ್ರಕರ್ತರು ಸೇರಿದಂತೆ ಎಲ್ಲಾ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದ್ದು, ಇದರೊಂದಿಗೆ ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

ದಾವಣಗೆರೆಯಲ್ಲಿ ಕಳೆದ ಫೆಬ್ರವರಿಯಲ್ಲಿ ನಡೆದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜಿ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.

ಬಜೆಟ್​​​ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಶಿವಾನಂದ ತಗಡೂರು ವಿನಂತಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net