ಆದೇಶ ಪಾಲಿಸದಿದ್ದಕ್ಕೆ ಬಸ್ ಜಪ್ತಿ

blank

ಸಾಗರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಸಾಗರ ನ್ಯಾಯಾಲಯದ ಆದೇಶದಂತೆ ಶಿರಸಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸನ್ನು ಜಪ್ತಿ ಮಾಡಿ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.
2022ರ ಜು.7ರಂದು ಬೆಳಗ್ಗೆ 5.30ಕ್ಕೆ ಪತ್ರಿಕೆ ಹಂಚಲು ತೆರಳುತ್ತಿದ್ದ ಗಣೇಶ್ ಎಂಬ ಯುವಕನಿಗೆ ಸಾಗರದ ಪ್ರವಾಸಿ ಮಂದಿರದ ಎದುರು ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದನು. ಮೃತನ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಶಿರಸಿ ಡಿಪೋ ಪರಿಹಾರ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಗಣೇಶನ ಪಾಲಕರು ಅಪಘಾತಕ್ಕೆ ಪರಿಹಾರ ಕೋರಿ ಸಾಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಗಣೇಶ್ ಅವರ ಪಾಲಕರಿಗೆ ಮೂರು ತಿಂಗಳೊಳಗೆ ಪರಿಹಾರ ನೀಡುವಂತೆ 2024ರ ಜು.8ರಂದು ನ್ಯಾಯಾಲಯ ಆದೇಶಿಸಿತ್ತು. ತೀರ್ಪು ಪ್ರಕಟವಾಗಿ ಮೂರು ತಿಂಗಳು ಕಳೆದರೂ ಕೆಎಸ್‌ಆರ್‌ಟಿಸಿ ಪರಿಹಾರ ನೀಡದ ಕಾರಣ ಗಣೇಶನ ತಾಯಿ ಉಮಾ ನ್ಯಾಯಾಲಯಕ್ಕೆ ಅಮಲ್ಜಾರಿ ಅರ್ಜಿ ಸಲ್ಲಿಸಿದ್ದರು. ನೋಟಿಸ್ ಜಾರಿಯಾದ ನಂತರವೂ ಕೆಎಸ್‌ಆರ್‌ಟಿಸಿ ಪರಿಹಾರದ ಹಣ ಪಾವತಿಸದ ಕಾರಣ ಶಿರಸಿ ಡಿಪೋಗೆ ಸೇರಿದ ಬಸ್ಸನ್ನು ಜಪ್ತಿ ಮಾಡಲಾಗಿದೆ.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…