More

    ಪಕ್ಕದ ರಾಜ್ಯದವರು ಓಕೆ ಅಂದ್ರೆ ಕೂಡ್ಲೇ ಬಸ್ ಬಿಡ್ತೇವೆ- ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

    ಬೆಂಗಳೂರು: ಪಕ್ಕದ ರಾಜ್ಯದವರು ಒಕೆ ಅಂದ ಕೂಡ್ಲೇ ಆ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುತ್ತೇವೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಂಗಳವಾರ ಹೇಳಿದ್ದಾರೆ.

    ದೇಶಾದ್ಯಂತ ಈಗ ಲಾಕ್​ಡೌನ್ ಸಡಿಲಿಸಲಾಗಿದೆ. ನಮ್ಮ ರಾಜ್ಯದಿಂದ ವಿಶೇಷವಾಗಿ ಗೋವಾ, ಕೇರಳ. ತಮಿಳುನಾಡು, ಪುದುಚೆರಿ, ತೆಲಂಗಾಣ ರಾಜ್ಯಗಳಿಗೆ ಪುನ: ಬಸ್ ಸಂಚಾರ ಪ್ರಾರಂಭಿಸಲು ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸಜ್ಜಾಗಿವೆ. ಆದರೆ ಪಕ್ಕದ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ತದನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ರು.

    ಇದನ್ನೂ ಓದಿ: VIDEO: ಚೇರ್​ನಿಂದ ಕೆಳಗೆ ಬಿದ್ದು ಟ್ರೋಲ್​ ಆದ ಪಾಕ್​ ಕ್ರಿಕೆಟಿಗ..!

    ಪರಿಸ್ಥಿತಿ ಸುಧಾರಣೆಗೊಂಡ ನಂತರ ಈಗಾಗಲೇ ಆಂಧ್ರ ಪ್ರದೇಶಕ್ಕೆ ಕರ್ನಾಟಕದಿಂದ ನಮ್ಮ ಸರ್ಕಾರಿ ಸಾರಿಗೆ ಬಸ್‍ಗಳ ಸಂಚಾರವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ನಮ್ಮ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಅಷ್ಟೇ ಅಲ್ಲ ಆಯಾ ಸಾರಿಗೆ ಸಂಸ್ಥೆಗಳಲ್ಲಿ ಇದಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ.

    ಇದನ್ನೂ ಓದಿ: ಜ್ವರ ಎಂದು ಆಸ್ಪತ್ರೆಗೆ ಹೋಗಿ ಬಂದವ ನಾಲೆಗೆ ಹಾರಿ ಪ್ರಾಣಬಿಟ್ಟ!

    ಈ ಎಲ್ಲಾ ರಾಜ್ಯಗಳಿಂದ ಶೀಘ್ರವೇ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆಯೂ ಇದೆ. ಹೀಗೆ ಆಯಾ ರಾಜ್ಯಗಳಿಂದ ವ್ಯಕ್ತವಾಗುವ ಪ್ರತಿಕ್ರಿಯೆಗಳನ್ನು ಆಧರಿಸಿ ಪುನ: ಬಸ್ ಸಂಚಾರ ಪ್ರಾರಂಭಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ. ಲಾಕ್‍ಡೌನ್‍ಗಿಂತ ಮುಂಚೆ ನಮ್ಮ ರಾಜ್ಯದಿಂದ ಒಟ್ಟು 2500 ಸರ್ಕಾರಿ ಬಸ್‍ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಈಗ ಮುಂಚಿನಂತೆ ಮತ್ತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸವದಿ ಅವರು ತಿಳಿಸಿದ್ದಾರೆ.

    ಉಪ್ಪಿನಕಾಯಿ ಜಾರೂ ಹೋಯ್ತು, 81,000 ರೂಪಾಯಿನೂ ಹೋಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts