More

    ಕಲಬುರಗಿಯಲ್ಲಿ ಬಸ್​ ಸಂಚಾರ ಸ್ಥಗಿತ; ಕರೊನಾ ವೈರಸ್​ ತಡೆಗೆ ಕಠಿಣ ಕ್ರಮ

    ಕಲಬುರಗಿ: ಪ್ರಪಂಚದಾದ್ಯಂತ ಕರೊನಾ ವೈರಸ್​ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದೆ. ರಾಜ್ಯದ ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಅನೇಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇಂದಿನಿಂದ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಮತ್ತು ರಾಜ್ಯಗಳಿಗೆ ತೆರಳುವ ಎಲ್ಲಾ ಖಾಸಗಿ ಬಸ್​ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

    ಕಲಬುರಗಿಯಿಂದ ರಾಜ್ಯ ರಾಜಧಾನಿ ಬೆಂಗಳೂರು, ಬೇರೆ ಬೇರೆ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ತೆರಳುವ ಎಲ್ಲಾ ಖಾಸಗಿ ಬಸ್ಸುಗಳನ್ನು ಸ್ಥಗಿತಗೊಳಿಸಿರುವುದಾಗಿ ಕಲಬುರಗಿ ಜಿಲ್ಲಾಧಿಕಾರಿ ಶರತ್​.ಬಿ. ತಿಳಿಸಿದ್ದಾರೆ. ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ತೆರಳುವ ಬಸ್ಸುಗಳು ಮತ್ತು ರಾಜ್ಯ ಹಲವೆಡೆ ತೆರಳುವ ಬಸ್ಸುಗಳಿಗೆ ಈಗಾಗಲೇ ಬುಕ್ಕಿಂಗ್​ ಆಗಿದ್ದು ಅವುಗಳನ್ನು ಸಹ ರದ್ದು ಮಾಡುವಂತೆ ಸೂಚಿಸಲಾಗಿದೆ. ಮುಂದಿನ ಆದೇಶದವರೆಗೂ ನಿಷೇಧ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.

    ಜಿಲ್ಲೆಯ ಗಡಿ ಪ್ರದೇಶಗಳಲ್ಲಿ 17 ಚೆಕ್​ ಪೋಸ್ಟ್​ಗಳನ್ನು ನಿರ್ಮಿಸಲಾಗುವುದು. ಖಾಸಗಿ ಬಸ್​ಗಳಲ್ಲಿ ಜಿಲ್ಲೆಗೆ ಬಂದು ಹೋಗಿರುವವರ ಪಟ್ಟಿಯನ್ನು ಕೊಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶದಿಂದ ಬಂದವರು ಖಾಸಗಿ ಬಸ್​ಗಳ ಮೂಲಕ ಜಿಲ್ಲೆಗೆ ಬಂದಿರುವ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

    ರಸ್ತೆ ಅಪಘಾತದಲ್ಲಿ ವರ್ಷಕ್ಕೆ ಸಾವಿರಾರು ಜನರು ಸಾಯುವಾಗ ಕರೊನಾ ಬಗ್ಗೆ ಇಷ್ಟೊಂದು ಚಿಂತೆಯೇಕೆ? ವೈದ್ಯರೇ ನೀಡಿದ್ದಾರೆ ಉತ್ತರ

    ಮಾರ್ಚ್​ 31ರವರೆಗೂ ಕರ್ನಾಟಕ ಬಂದ್​! ತುರ್ತು ಸಚಿವ ಸಂಪುಟ ಸಭೆಯಲ್ಲಿ ಬಂದ್​ ವಿಸ್ತರಣೆಯ ಮಹತ್ವದ ನಿರ್ಧಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts