More

    ಬಸ್ ಸಮಸ್ಯೆಗೆ ಇತಿಶ್ರೀ

    ಹುಕ್ಕೇರಿ: ತಾಲೂಕಿನ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ಅಗತ್ಯ ಬಸ್ ಸೇವೆ ಒದಗಿಸಲು ಪ್ರಯತ್ನಿಸಲಾಗುತ್ತಿದ್ದು, ೆಬ್ರವರಿ ತಿಂಗಳಿನಿಂದ ಇನ್ನಷ್ಟು ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

    ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಹೆಚ್ಚಿನ ಬಸ್ ಸಂಚಾರ ಒದಗಿಸಲಾಗುವುದು ಎಂದರು.

    ಕೋಚರಿ, ರಾಜಕಟ್ಟಿ, ದಡ್ಡಿ, ಮಾರಣಹೋಳ, ಉಳ್ಳಾಗಡ್ಡಿ- ಖಾನಾಪುರ, ಯಮಕನಮರಡಿ ಸೇರಿ ಮತ್ತಿತರ ಮಾರ್ಗಗಳಲ್ಲಿ ಬಸ್‌ಗಳ ಕೊರತೆಯಿದೆ ಎಂಬ ದೂರುಗಳಿವೆ. ಹಾಗಾಗಿ, ಈ ಮಾರ್ಗಗಳಲ್ಲಿ ಬಸ್ ಓಡಾಟ ಆರಂಭಿಸಬೇಕು. ೆಬ್ರವರಿ ತಿಂಗಳಲ್ಲಿ ಪ್ರತಿ ಡಿಪೋಗೆ 10 ಹೊಸ ಬಸ್‌ಗಳು ಬರಲಿದ್ದು, ಮತ್ತಷ್ಟು ಬಸ್ ಸೇವೆ ವಿಸ್ತರಿಸಲು ಸಹಕಾರಿಯಾಗಲಿದೆ ಎಂದರು.

    ಜಲಜೀವನ ಮಿಷನ್ (ಜೆಜೆಎಂ) ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ತಾಂತ್ರಿಕ ದೋಷವಿದ್ದು ಬಹುತೇಕ ಕಡೆಗಳಲ್ಲಿ ಅವೈಜ್ಞಾನಿಕವಾಗಿ ಕೆಲಸ ಮಾಡಲಾಗಿದೆ ಎಂಬ ದೂರುಗಳಿವೆ. ಈ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಂಬಂಧಿತ ಗುತ್ತಿಗೆದಾರರಿಂದ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿಸಬೇಕು ಎಂದು ಸೂಚಿಸಿದರು.

    ತಾಲೂಕಿನ ವಿವಿಧ ಗ್ರಾಮಗಳ ಜನರ ಅಹವಾಲು, ಕುಂದುಕೊರತೆ ಆಲಿಸಿದ ಸಚಿವರು, ಕೂಡಲೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಆಡಳಿತಾಧಿಕಾರಿ ಲಕ್ಷ್ಮಣ ಬಬಲಿ, ತಹಸೀಲ್ದಾರ್ ಮಂಜುಳಾ ನಾಯಕ, ತಾಪಂ ಇಒ ಪ್ರವೀಣ ಕಟ್ಟಿ, ಮ್ಯಾನೇಜರ್ ಅವಿನಾಶ ಹೊಳೆಪ್ಪಗೋಳ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ರವೀಂದ್ರ ಜಿಂಡ್ರಾಳಿ, ಇಲಿಯಾಸ್ ಇನಾಮದಾರ್, ಕಿರಣ ರಜಪೂತ, ದಯಾನಂದ ಪಾಟೀಲ, ವೃಷಭ ಪಾಟೀಲ, ಬಸವರಾಜ ಕೋಳಿ, ಆನಂದ ತವಗಮಠ, ಅಕ್ಷಯ ವೀರಮುಖ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts