More

    ಆಗದು ಎಂದು ಕೈಕಟ್ಟಿ ಕುಳಿತರೆ…ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದ ಸಿದ್ದರಾಮಯ್ಯ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಶರಣಚಿಂತನೆಯನ್ನ ಓದಿ ಹೇಳಿದ ಸಿಎಂ, ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು.

    ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

    ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದರು.

    ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 

    ಕರ್ನಾಟಕ ಬಜೆಟ್ 2024: ಮದ್ಯದ ಮೇಲಿನ ಸುಂಕ ಏರಿಕೆ ಸಾಧ್ಯತೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts