More

    ಕಿರಗುಂದ ಗ್ರಾಮದ ಮೃತ ವ್ಯಕ್ತಿಗೆ ಕರೊನಾ ಪಾಸಿಟಿವ್

    ಮೂಡಿಗೆರೆ: ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕಿರುಗುಂದ ಗ್ರಾಮದ 64 ವರ್ಷದ ವ್ಯಕ್ತಿ ನಿಧನರಾದ ನಂತರ ಕರೊನಾ ಸೋಂಕು ದೃಢಪಟ್ಟಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

    ಕಿರುಗುಂದದ ದಿನಸಿ ವ್ಯಾಪಾರಿ ಕಳೆದ 4 ವರ್ಷದಿಂದ ಮೂತ್ರಪಿಂಡ ರೋಗದಿಂದ ಬಳಲುತ್ತಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಜು.8ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಕರೊನಾ ಪರೀಕ್ಷೆಗೆ ಕಳಿಸಲಾಗಿತ್ತು. 10ರಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮೂಡಬಿದ್ರೆಯ ಹಂಡೇಲ್ ಗ್ರಾಮದ ಇನ್ನೊಂದು ಮನೆಗೆ ಕಟುಂಬಸಮೇತ ತೆರಳಿದ್ದರು. ಅಂದೇ ಬೆಳಗ್ಗೆ 11.30ಕ್ಕೆ ನಿಧನರಾದರು.

    ಜು.10ರ ಸಂಜೆ ಹಂಡೇಲ್ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. 8ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ ಗಂಟಲು ದ್ರವ ಪರೀಕ್ಷೆ ವರದಿ ಶನಿವಾರ ಬಂದಿದ್ದು, ಮೃತ ವ್ಯಕ್ತಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಿರುಗುಂದದ ಅವರ ಮನೆಯನ್ನು ಸೀಲ್​ಡೌನ್ ಮಾಡಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಸಂಪೂರ್ಣ ಹಾಸಿಗೆ ಹಿಡಿದಿದ್ದ ವ್ಯಕ್ತಿಗೆ ಯಾವ ಸಂಪರ್ಕವೂ ಇಲ್ಲದೆ ಕರೊನಾ ಪಾಸಿಟಿವ್ ಬಂದಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts