ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ, ದೇಶಾದ್ಯಂತ ಹೊಸ ಬೆಲೆ ಇಂದಿನಿಂದ ಜಾರಿ

ನವದೆಹಲಿ: ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಇಂದಿನಿಂದ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಮೇಲೆ ಈ ಹೆಚ್ಚಳ  ಕಂಡುಬಂದಿದ್ದು, ಪ್ರತಿ ಸಿಲಿಂಡರ್​​​​ಗೆ 21 ರೂ. ಹೆಚ್ಚಾಗಿದೆ. ಇಂದಿನಿಂದ, ಡಿಸೆಂಬರ್ 1, 2023 ರಿಂದ, ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗೆ 1796.50ರೂ. ಪಾವತಿಸಬೇಕಾಗುತ್ತದೆ, ಆದರೆ ಕಳೆದ ತಿಂಗಳು ವಾಣಿಜ್ಯ ಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್‌ಗೆ 1775.50 ರೂ.ಆಗಿತ್ತು.   ಗೃಹಬಳಕೆ ಎಲ್‌ಪಿಜಿ … Continue reading ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ, ದೇಶಾದ್ಯಂತ ಹೊಸ ಬೆಲೆ ಇಂದಿನಿಂದ ಜಾರಿ