ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

rajeshwari shetty police case
Published on

ಉಡುಪಿ: ಎನ್‌ಆರ್‌ಐ ಉದ್ಯಮಿ, ಇಂದ್ರಾಳಿ ನಿವಾಸಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಯನ್ನೇ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ ಕೊಲೆ ಕೇಸ್​ನಲ್ಲಿ ಜಾಮೀನು ಪಡೆದು ಹೊರ ಬಂದಿದ್ದರು. ಸದ್ಯ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ರಾಜೇಶ್ವರಿ ಶೆಟ್ಟಿ ಮೇಲೆ ಕೇಸ್ ದಾಖಲಾಗಿದೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಮಾಲೀಕತ್ವದ ಖಾಸಗಿ ಹೋಟೆಲ್​ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳಾದ ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ ಎಂಬುವರನ್ನು ಬಂಧಿಸಿದ್ದಾರೆ. ರಾಜೇಶ್ವರಿ ಶೆಟ್ಟಿ ಸೇರಿದಂತೆ ಮೂವರ ಬಂಧನ ಬಾಕಿ ಇದೆ. ಇದನ್ನೂ ಓದಿರಿ ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಭಾಸ್ಕರ್​ ಶೆಟ್ಟಿ ಕೊಲೆ ಪ್ರಕರಣ ದೇಶ, ವಿದೇಶದಲ್ಲೂ ಸುದ್ದಿಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ. 2016 ಜುಲೈ 28ರಂದು ಇಂದ್ರಾಳಿ ಮನೆಯಲ್ಲಿ ಭಾಸ್ಕರ ಶೆಟ್ಟಿ ಸ್ನಾನ ಮುಗಿಸಿ ಹೊರ ಬರುವಾಗ ಆರೋಪಿಗಳು ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ, ರಾಡಿನಿಂದ ತಲೆಗೆ ಹೊಡೆದು ಕೊಲೆಗೈದಿದ್ದರು. ಬಳಿಕ ಮೃತದೇಹವನ್ನು ಕಾರಿನಲ್ಲಿ ನಂದಳಿಕೆ ನಿರಂಜನ್ ಭಟ್ ಮನೆಗೆ ಸಾಗಿಸಿ, ಮೃತದೇಹ ಸುಡಲೆಂದೇ ನಿರ್ಮಿಸಲಾಗಿದ್ದ ಹೋಮಕುಂಡದಲ್ಲಿ ಸುಟ್ಟಿದ್ದರು. ಬಳಿಕ ಊರಿನ ಸಮೀಪವಿದ್ದ ನೀರಿನ ತೋಡಿಗೆ ಮೂಳೆ, ಬೂದಿಯನ್ನು ಬಿಸಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net