ನಟಿ ತ್ರಿಷಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉದ್ಯಮಿಯನ್ನು ವರಿಸಲಿದ್ದಾರೆ 37 ವರ್ಷದ ಸ್ಟಾರ್​ ನಟಿ!

blank

ಚೆನ್ನೈ: ಬಹುಭಾಷ ನಟಿ ತ್ರಿಷಾ ಅವರವನ್ನು ಪರಿಚಯಿಸುವ ಅಗತ್ಯವಿಲ್ಲ. ತಮಿಳು, ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್​ ನಟಿಯಾಗಿರುವ ತ್ರಿಷಾ ಇಳಯದಳಪತಿ ವಿಜಯ್​, ಸೂರ್ಯ, ವಿಕ್ರಮ್, ಪ್ರಭಾಸ್​, ಚಿರಂಜೀವಿ, ಅಜಿತ್​, ಸಿಂಬು ಸೇರಿದಂತೆ ಸ್ಟಾರ್​ ನಟರ ಜೊತೆ ಅಭಿನಯಿಸಿದ್ದಾರೆ. ಕನ್ನಡದಲ್ಲೂ ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ಪವರ್​ಸ್ಟಾರ್​ ಸಿನಿಮಾದಲ್ಲಿ ನಾಯಕಿಯಾಗುವ ಮೂಲಕ ಕನ್ನಡಿಗರಿಗೂ ಪರಿಚಿತರಾಗಿದ್ದಾರೆ.

blank

ಇತ್ತೀಚೆಗಷ್ಟೇ ಅವರ ನಟನೆಯ ಪೊನ್ನಿಯನ್​ ಸೆಲ್ವನ್​ ಮತ್ತು ಲಿಯೋ ಸಿನಿಮಾ ಉತ್ತಮ ಯಶಸ್ಸು ಗಳಿಸಿತು. ಸಾಕಷ್ಟು ಸಿನಿಮಾಗಳಲ್ಲಿ ತ್ರಿಷಾ ಬಿಜಿಯಾಗಿದ್ದಾರೆ. ವಯಸ್ಸು 40 ಆದ್ರೂ ಬ್ಯಾಚುಲರ್​ ಆಗಿಯೇ ಉಳಿದಿದ್ದಾರೆ. ಈ ಹಿಂದೆ ನಟ ಸಿಂಬು ಮತ್ತು ರಾಣ ದಗ್ಗುಬಾಟಿ ಅವರ ಜೊತೆ ತ್ರಿಷಾ ಡೇಟಿಂಗ್​ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಇದು ವದಂತಿಯಾಗಿಯೇ ಉಳಿಯಿತು. ಇದರ ನಡುವೆ ತ್ರಿಷಾ ಅವರು 2015ರಲ್ಲಿ ಉದ್ಯಮಿ ವರುಣ್ ಮಣಿಯನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಇದು ಬಹಳ ಸುದ್ದಿಯಾಗಿತ್ತು. ಅಲ್ಲದೆ, ನಿಶ್ಚಿತಾರ್ಥದ ಫೋಟೋಗಳು ಸಹ ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ಆದರೆ, ಇಬ್ಬರ ನಡುವೆ ಏನಾಯಿತೋ ಗೊತ್ತಿಲ್ಲ, ಏಕಾಏಕಿ ಇಬ್ಬರೂ ಬೇರ್ಪಟ್ಟರು! ಮದುವೆಯೂ ನಿಂತುಹೋಯಿತು.

ಇದರ ಬೆನ್ನಲ್ಲೇ ವರುಣ್ ಮಣಿಯನ್ ಅವರು ಖ್ಯಾತ ನಟಿ ಬಿಂದು ಮಾಧವಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಕುರಿತು ಮಾತನಾಡಿದ್ದ ನಟಿ ಬಿಂದು ಮಾಧವಿ, ನಾವಿಬ್ಬರೂ ಡೇಟಿಂಗ್ ಮಾಡುತ್ತಿದ್ದೇವೆ ಎಂದು ಖಚಿತಪಡಿಸಿದ್ದರು. ವರುಣ್ ಅವರು ತ್ರಿಷಾ ಜೊತೆ ಮದುವೆ ಮುರಿದುಕೊಂಡ ನಂತರವೇ ನಾವಿಬ್ಬರೂ ಡೇಟಿಂಗ್ ಆರಂಭಿಸಿದ್ದೇವೆ. ತ್ರಿಷಾ ಜೊತೆ ರಿಲೇಶನ್​ಶಿಫ್​ ನಲ್ಲಿರುವಾಗ ನಾನು ಅವರೊಂದಿಗೆ ಡೇಟಿಂಗ್ ಮಾಡುತ್ತಿರಲಿಲ್ಲ ಎಂದು ಹೇಳಿದ್ದರು. ಇದೀಗ ವರಣ್​ ಮತ್ತು ಬಿಂದು ಮಾಧವಿ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಾಲಿವುಡ್​ನಲ್ಲಿ ಇದು ಬಹಳಷ್ಟು ಚರ್ಚೆಯಾಗುತ್ತಿದೆ.

Bindu Madhavi

ಅಂದಹಾಗೆ ಬಿಂದು ಮಾಧವಿ ಅವರು ತಮಿಳು ಮತ್ತು ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಜಗು, ಸಟ್ಟಂ ಒರು ಇರುತ್ತರೈ, ಕೇಡಿ ಬಿಲ್ಲಾ ಕಿಲಾಡಿ ರಂಗ ಮತ್ತು ದೇಸಿಂಗು ರಾಜಾ ಸಿನಿಮಾಗಳು ಬಿಂದು ಅವರಿಗೆ ಉತ್ತಮ ಹೆಸರು ತಂದುಕೊಟ್ಟವು. (ಏಜೆನ್ಸೀಸ್​)

ಬೇಸಿಗೆಯಲ್ಲಿ ತಾಳೆ ಹಣ್ಣು ತಿನ್ನುವುದರಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿದ್ರೆ ನೀವು ಅಚ್ಚರಿಪಡ್ತೀರಾ!

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank