

ಬೆಳಗಾವಿ: ಉದ್ಯಮಿಯೊಬ್ಬರ ಸೊಸೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಉದ್ಯಮಿ ಜಯಶೀಲ ಶೆಟ್ಟಿ ಅವರ ಸೊಸೆ ಶೀತಲ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಜಯಶೀಲ ಶೆಟ್ಟಿ ಅವರ ಪುತ್ರ ಮನೀಶ್ ಅವರ ಪತ್ನಿ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಈ ಪ್ರಕರಣ ನಡೆದಿದೆ.
ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ವರ್ಷದ ಹಿಂದಷ್ಟೇ ಈ ದಂಪತಿಗೆ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ಗಂಡ ಟೂರ್ಗೆ ಕರೆದುಕೊಂಡು ಹೋಗುವುದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಸ್ಥರು ವಿದೇಶ ಪ್ರವಾಸದಲ್ಲಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.