ಮಜ್ಜಿಗೆ, ಪಾನಕ ವಿತರಣೆ

ಗುಂಡ್ಲುಪೇಟೆ: ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಶ್ರೀಗಳ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಮಜ್ಜಿಗೆ ಹಾಗೂ ಪಾನಕ ವಿತರಣೆ ಮಾಡಲಾಯಿತು.

ಪಟ್ಟಣದ ಪಿಕಾರ್ಡ್ ಬ್ಯಾಂಕ್ ವೃತ್ತದಲ್ಲಿ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್ ಪುಷ್ಪಾರ್ಚನೆ ಮಾಡಿದರು.

ನಂತರ ಮಾತನಾಡಿ, ಡಾ.ಶಿವಕುಮಾರ ಸ್ವಾಮೀಜಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ದಾಸೋಹವನ್ನು ಉಚಿತವಾಗಿ ನೀಡುವ ಮೂಲಕ ಮಾದರಿಯಾಗಿದ್ದಾರೆ. ಒಂದು ಜಾತಿಗೆ ಸೀಮಿತವಾಗದೆ ಎಲ್ಲರನ್ನು ಸಮಾನ ದೃಷ್ಟಿಯಿಂದ ಕಾಣುತ್ತಿದ್ದರು. ಹೀಗಾಗಿ ಅವರನ್ನು ಜನರು ನಡೆದಾಡುವ ದೇವರು ಎಂದೇ ಕರೆಯುತ್ತಿದ್ದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಿದರೆ ಶ್ರೀಗಳಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ವೀರಶೈವ ಯುವ ವೇದಿಕೆಯ ಕಡಬೂರು ಮಂಜುನಾಥ್, ಮಲೆಯೂರು ನಾಗೇಂದ್ರ, ಹುಂಡೀಪುರ ಮಂಜುನಾಥ್, ಶಂಕರಪ್ಪ, ಮನು ಹಲವರು ಇದ್ದರು.