More

    ಅಧಿಕೃತ ನೀರಿನ ಸಂಪರ್ಕ ಪಡೆಯಲು ಸೂಚನೆ; ಮೇ.7 ಅರ್ಜಿ ಸಲ್ಲಿಸಲು ಅಂತಿಮ ದಿನ

    ಬೆಂಗಳೂರು: ಜಲಮಂಡಳಿ ಕಾಯ್ದೆಯ ಉಲ್ಲಂಘನೆ ಮಾಡಿ ಅನಧಿಕೃತವಾಗಿ ಒಳಚರಂಡಿ ನೀರನ್ನು ಸಂಪರ್ಕ ಪಡೆದಿದ್ದಲ್ಲಿ ಮೇ.7ರ ಒಳಗಾಗಿ ಅರ್ಜಿ ಸಲ್ಲಿಸಿ ಅಧಿಕೃತ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಜಲಮಂಡಳಿ ಕಾಯ್ದೆಯ ಉಲ್ಲಂಘನೆ ಮಾಡಿ ಅನಧಿಕೃತವಾಗಿ ಒಳಚರಂಡಿ ನೀರನ್ನು ಸಂಪರ್ಕ ಪಡೆದಿದ್ದಲ್ಲಿ ಮೇ.7ರ ಒಳಗಾಗಿ ಬೆಂಗಳೂರು ಜಲಮಂಡಳಿಗೆ ಅರ್ಜಿ ಸಲ್ಲಿಸಿ ಅಂತಹ ಅನಧಿಕೃತ ಸಂಪರ್ಕವನ್ನು ಮಂಡಳಿಯ ನಿಯಮಾನುಸಾರ ಅಧಿಕೃತ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

    ಒಂದು ವೇಳೆ ಮೇ.7ರ ನಂತರ ಒಳಚರಂಡಿ ನೀರನ್ನು ಅನಧಿಕೃತವಾಗಿ ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಅಥವಾ ಮಳೆ ನೀರು ಕಾಲುವೆಗೆ ಹರಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.

    ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964 ಕಲಂ 65 ಮತ್ತು 72 ರನ್ವಯ ಬಿ.ಬಿ.ಎಂ.ಪಿ ವ್ಯಾಪ್ತಿಯ ಬೆಂಗಳೂರು ನಗರದ ನಾಗರೀಕರು ತಮ್ಮ ಕಟ್ಟಡದ ಒಳಚರಂಡಿ ನೀರನ್ನು ಕಡ್ಡಾಯವಾಗಿ ಬೆಂಗಳೂರು ಜಲಮಂಡಳಿಯಿಂದ ನೀರು ಮತ್ತು ಒಳಚರಂಡಿ ಸಂಪರ್ಕವನ್ನು ಪಡೆದು ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಹರಿಸಬೇಕಾಗಿರುತ್ತದೆ.

    ಇನ್ನು ಎಲ್ಲಾ ಮಾದರಿಯ ದೊಡ್ಡಗಾತ್ರದ ಕಟ್ಟಡದವರು ನಿಯಮಾನುಸಾರ ಎಸ್.ಟಿ.ಪಿ ಅಳವಡಿಸಿಕೊಂಡು ಸಂಸ್ಕರಿಸಿದ ನೀರನ್ನು ತಮ್ಮ ಕಟ್ಟಡದಲ್ಲಿ ಗೃಹ ಬಳಕೆಗೆ ಹೊರತುಪಡಿಸಿ ಇನ್ನಿತರೆ ಅನ್ಯ ಉದ್ದೇಶಗಳಿಗೆ ಬಳಸಬೇಕಾಗಿರುತ್ತದೆ. ಕೆಲವರು ಈ ಕ್ರಮವನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ ಒಳಚರಂಡಿ ನೀರನ್ನು ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಹಾಗೂ ಮಳೆ ನೀರು ಕಾಲುವೆಗೆ ಹರಿಸುತ್ತಿರುವುವರ ಬಗ್ಗೆ ಬೆಂಗಳೂರು ಜಲಮಂಡಳಿಯಿಂದ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts