More

    ಅನಧಿಕೃತ ನೀರು ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಮಾಹಿತಿ

    ಬೆಂಗಳೂರು: ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಶುಕ್ರವಾರ ನೇರ ಫೋನ್ ಇನ್ ಕಾರ್ಯಕ್ರಮ ನಡೆಸಿ, ನೀರು ಮತ್ತು ಒಳಚರಂಡಿ ಕುರಿತ ವಿವಿಧ ಅಹವಾಲುಗಳನ್ನು ಆಲಿಸಿದರು. ಸಾರ್ವಜನಿಕರು ತಮ್ಮ ವಲಯ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಗಳ ಕುರಿತು ನೇರವಾಗಿ ಪರಿಹಾರ ಪಡೆದುಕೊಂಡರು.

    ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮಕ್ಕೆ ಸೂಚನೆ

    ಕಾಡುಗೋಡಿ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ, ಒಳಚರಂಡಿ ಸಂಪರ್ಕ ಪಡೆದಿರುವ 43 ಜನರು ಪಿಜಿಗಳನ್ನು ನಡೆಸುತ್ತಿದ್ದಾರೆ ಎಂದು ನಿವಾಸಿಯೊಬ್ಬರು ದೂರವಾಣಿ ಮೂಲಕ ದೂರು ನೀಡಿದರು. ನಗರದ ಹಲವಾರು ಭಾಗಗಳಿಂದ ಇಂತಹ ದೂರುಗಳು ಬರುತ್ತಿವೆ. ವಾಣಿಜ್ಯ ಉದ್ದೇಶದ ಸಂಪರ್ಕ ಪಡೆದುಕೊಂಡು ಪಿಜಿಗಳನ್ನು ನಡೆಸುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಅನಧಿಕೃತವಾಗಿ ನೀರಿನ ಮತ್ತು ಒಳಚರಂಡಿ ಸಂಪರ್ಕ ಪಡೆದುಕೊಳ್ಳುವುದು ಹಾಗೂ ಆ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲ. ಇದರಿಂದ ಜಲಮಂಡಳಿಗೆ ನಷ್ಟವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಒಂದು ವಾರದೊಳಗೆ ಈ ಬಗ್ಗೆ ಪರಿಶೀಲನೆ ನಡೆಸಿ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ದೂರುಗಳ ವಿಲೇವಾರಿಯ ನಂತರ ವರದಿ ನೀಡಿ

    ಇಂದು ದಾಖಲಾದ ದೂರಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಇದನ್ನು ಖಚಿತ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಗಳು ದೂರುಗಳನ್ನು ಲಿಖಿತ ರೂಪದಲ್ಲಿ ಸಂಬಂಧ ಪಟ್ಟ ಮುಖ್ಯ ಇಂಜಿನಿಯರ್​ಗಳಿಗೆ ಕಳುಹಿಸಿಕೊಡಬೇಕು. ಸಮಸ್ಯೆಗಳನ್ನು ಪರಿಹರಿಸಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts