ಬೆಂಗಳೂರು ನಗರಕ್ಕೆ ಈ ಎರಡು ದಿನ ಕಾವೇರಿ ನೀರು ಪೂರೈಕೆ ಇಲ್ಲ!

Water Supply
Published on

ಬೆಂಗಳೂರು: ಕಾವೇರಿ 5ನೇ ಹಂತದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಹಿನ್ನೆಲೆ ಜೂ.4 ಮತ್ತು ಜೂ.5 ರಂದು ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಕಾವೇರಿ 1, 2 ಮತ್ತು 3ನೇ ಹಂತದ ನೀರು ಸರಬರಾಜು ಘಟಕಗಳ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ಕಾವೇರಿ 4ನೇ ಹಂತ, 1ನೇ ಮತ್ತು 2ನೇ ಘಟ್ಟಗಳ ನೀರು ಸರಬರಾಜು ಘಟಕಗಳಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳಬೇಕು ಎಂದು ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net