20.4 C
Bengaluru
Monday, January 20, 2020

ಕೂಡ್ಲಗಿಯಲ್ಲಿ ಕುಚುಕು ಗೆಳೆಯರಾದ ಗೌಡ-ಸಿದ್ದು

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಕೂಡ್ಲಿಗಿ (ಬಳ್ಳಾರಿ): ಜನತಾ ಪರಿವಾರದಿಂದ ದೂರವಾದ ನಂತರ ಬದ್ಧ ವೈರಿಗಳಂತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಕುಚುಕು ಗೆಳೆಯರಂತೆ ಮಾತನಾಡಿದರು.

ಜೆಡಿಎಸ್-ಕಾಂಗ್ರೆಸ್ ನಾಯಕರ ಒಗ್ಗಟ್ಟು ಪ್ರದರ್ಶನ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆ ಇಲ್ಲ ಎನ್ನುವ ಸಂದೇಶದ ವೇದಿಕೆಯಾಗಿ ಬಳ್ಳಾರಿ ಲೋಕಸಭಾ ಉಪಸಮರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರ ಕೂಡ್ಲಿಗಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಚಾರದ ಸಭೆ ಸಾಕ್ಷಿಯಾಯಿತು.

ದೇವೇಗೌಡರು ಮಾತನಾಡಿ, ಮೋದಿ ಪ್ರಧಾನಿಯಾದ ನಂತರ ದೇಶದಲ್ಲಿ ಶಾಂತಿ ಇಲ್ಲವಾಗಿದೆ. ಗುಜರಾತ್​ನಲ್ಲಿ ಪರಿಶಿಷ್ಟರನ್ನು ಬೆತ್ತಲೆ ಮಾಡಿ ಹೊಡೆಯಲಾಗಿದೆ. ಹರಿಯಾಣದಲ್ಲಿ ದನದ ಮಾಂಸದ ವಿಷಯದಲ್ಲಿ ಅಮಾಯಕರನ್ನು ಸಾಯಿಸಲಾಗಿದೆ. ಉತ್ತರ ಪ್ರದೇಶದಲ್ಲೂ ಅದೇ ಪರಿಸ್ಥಿತಿ ಇದೆ. ರಾಜ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಐದು ಸ್ಥಾನ ಗೆದ್ದರೆ, ದೇಶದ ರಾಜಕಾರಣವೇ ಬದಲಾಗಲಿದೆ ಎಂದರು.

ರಾಜ್ಯದಲ್ಲಿ ಚುನಾವಣೆ ನಡೆಯುವ ಐದು ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ ಅಲೆಯಿದೆ. ಧರ್ಮ, ಜಾತಿ ಹೆಸರಿನಲ್ಲಿ ಜನರ ದಾರಿ ತಪ್ಪಿಸಿದ್ದರಿಂದ ಅವರಿಗೆ ಅಧಿಕಾರ ಸಿಗಲಿಲ್ಲ. ಕಾಂಗ್ರೆಸ್ ಸರ್ಕಾರದ ಯೋಜನೆಗಳು ಸಮ್ಮಿಶ್ರ ಸರ್ಕಾರದಲ್ಲೂ ಮುಂದುವರಿಯಲಿವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದೇನಪ್ಪ ಸಿದ್ದರಾಮಯ್ಯ-ದೇವೇಗೌಡ ಸ್ವಾರ್ಥಕ್ಕಾಗಿ ಒಂದಾಗಿದ್ದಾರೆ ಅಂದ್ಕೋಬೇಡಿ. ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. 32 ಸ್ಥಾನ ಗೆದ್ದಿರುವ ಜೆಡಿಎಸ್​ಗೆ ಸಿಎಂ ಆಗಲು ಕಾಂಗ್ರೆಸ್ ಅವಕಾಶ ಕೊಟ್ಟಿದೆ. ಎಲ್ಲರೂ ಐಕ್ಯತೆಯಿಂದ ಬಿಜೆಪಿ ಸೋಲಿಸಬೇಕಿದೆ.

| ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ

ನಿಮ್ಮ ಪಾಪ ಅರಿಯಲು ಪ್ರತಾಪ್​ನ ಪುಸ್ತಕ ಓದಿ

ಬಳ್ಳಾರಿ: ಜನಾರ್ದನ ರೆಡ್ಡಿ ಆರೋಪಗಳಿಗೆ ಸಿದ್ದರಾಮಯ್ಯ ಸರಣಿ ಟ್ವೀಟ್​ಗಳ ಮೂಲಕ ತಿರುಗೇಟು ನೀಡಿದ್ದಾರೆ. ಚಿನ್ನದ ಕುರ್ಚಿ, ಕಮೋಡ್ ರೆಡ್ಡಿ ವೈಭವದ ಜೀವನಕ್ಕೆ ಸಾಕ್ಷ್ಯ ಆಗಿದ್ದವು. ಈ ಸಂಪತ್ತೆಲ್ಲ ಎಲ್ಲಿಂದ ಬಂತು. ಅವರೇನು ಸಾಮ್ರಾಟನ ವಂಶಸ್ಥರೇ? ನನ್ನನ್ನು ಅನ್ಯಾಯವಾಗಿ ಜೈಲಿಗೆ ಹಾಕಿಸಿದ್ದರು ಎಂದು ಕಣ್ಣೀರು ಹಾಕುತ್ತಿರುವ ರೆಡ್ಡಿ, ಅವರ ಪಕ್ಷದ ಸಂಸದರೇ (ಪ್ರತಾಪ್ ಸಿಂಹ) ಬರೆದಿದ್ದ ಪುಸ್ತಕ ಓದಲಿ. ಏನು ಪಾಪ ಮಾಡಿದ್ದೀರಿ ಎಂದು ತಿಳಿಯಲಿದೆ. ಚರ್ಚೆಗೆ ನಾನು ರೆಡಿ. ಅವರೇ ಸ್ಥಳ ಮತ್ತು ಸಮಯ ನಿಗದಿಪಡಿಸಲಿ ಎಂದಿರುವ ಸಿದ್ದರಾಮಯ್ಯ, ನನ್ನನ್ನು ಕೆಣಕಿದರೆ ಜಾಮೀನು ರದ್ದಾಗಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಕೂಡ ಎಚ್ಚರಿಸಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...