ಬೆಂಗಳೂರು: ಬೆಂಗಳೂರು ನಗರ ಜಿಲ್ಲೆೆಯ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಪರವಾನಿಗೆ ಪಡೆದು ಬಳಸುತ್ತಿರುವ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಠೇವಣೆ ಮಾಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1973 ರ ಕಲಂ 144 ಬಿ.ಎನ್.ಎಸ್.ಕಾಯ್ದೆ ಕಲಂ 189 (4) ರಡಿ ಯಾವುದೇ ಶಸ್ತ್ರ ಪರವಾನಿಗೆದಾರರು ತಮ್ಮ ಶಸಾಸಗಳನ್ನು ಚುನಾವಣೆ ಸ್ಥಳ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತೊಯುವುದು ಮತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.