21 C
Bengaluru
Thursday, January 23, 2020

ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಮತ್ತಷ್ಟು ಭದ್ರ ಸರ್ಕಾರವಾಗಿ ನಿರ್ಮಾಣಗೊಳ್ಳುತ್ತದೆ: ಸಂಸದೆ ಶೋಭಾ ಕರಂದ್ಲಾಜೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ವಿಜಯಪುರ: ಈ ಉಪಚುನಾವಣೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರನ್ನು ಗಟ್ಟಿಗೊಳಿಸುವ ಚುನಾವಣೆ. ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಮತ್ತಷ್ಟು ಭದ್ರ ಸರ್ಕಾರವಾಗಿ ನಿರ್ಮಾಣಗೊಳ್ಳುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ಸ್ಥಿರವಾದ ಹಾಗೂ ಅಭಿವೃದ್ದಿಗೆ ಪೂರಕವಾದ ಸರ್ಕಾರ ಬೇಕು ಎಂಬುದು ಜನರ ಬಯಕೆಯಾಗಿತ್ತು. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಾತಿ-ಜಾತಿಗಳ ನಡುವೆ ಬಿರುಕು ಮೂಡಿಸುವ ಪ್ರಯುತ್ನ ನಡೆಯಿತು. ಅಧಿಕಾರ ಮುಗಿದ ಬಳಿಕ ಮತ್ತೆ 14 ತಿಂಗಳು ಕಾಲ ಕುಮಾರಸ್ವಾಮಿ ಅವರೊಂದಿಗೆ ಕೈ ಜೋಡಿಸಿ ಮತ್ತೆ ಸರ್ಕಾರ ನಡೆಸಿದರು. ಯಾವಾಗ ತಾವಾಗಿಯೇ ಕೆಲ ಶಾಸಕರು ರಾಜೀನಾಮೆ ಸಲ್ಲಿಸಿದರು. ಚುನಾವಣಾ ಘೋಷಣೆಯಾದ ಬಳಿಕ ರಾಜೀನಾಮೆ ಕೊಟ್ಟ ಅಭ್ಯರ್ಥಿಗಳನ್ನು ಬಿಜೆಪಿಗೆ ಸೇರಿಸಿಕೊಂಡು ಟಿಕೆಟ್ ನೀಡಿದೆವು ಎಂದು ತಿಳಿಸಿದರು.

ಕೇಂದ್ರ-ರಾಜ್ಯದಲ್ಲಿ ಒಂದೇ ಸರ್ಕಾರ
ಚುನಾವಾಣಾ ಫಲಿತಾಂಶಕ್ಕೆ ಕೆಲ ಗಂಟೆಗಳಷ್ಟೇ ಬಾಕಿ ಉಳಿದಿದೆ. ಈ ಚುನಾವಣೆ ಯಡಿಯೂರಪ್ಪರನ್ನು ಗಟ್ಟಿಗೊಳಿಸುವ ಚುನಾವಣೆಯಾಗಿದೆ. ಫಲಿತಾಂಶದ ಬಳಿಕ ಬಿಜೆಪಿ ಮತ್ತಷ್ಟು ಭದ್ರ ಸರ್ಕಾರವಾಗಿ ನಿರ್ಮಾಣಗೊಳ್ಳುತ್ತದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಬೇಕೆಂಬುದು ಜನರ ಬಹುದಿನದ ಬೇಡಿಕೆಯಾಗಿತ್ತು. 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಇದೆ. ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಸರ್ಕಾರ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಎಸ್​ಟಿ ಅನುಕೂಲವಾಗಲಿದೆ
ಜಿಎಸ್​ಟಿ ಬಂದ್ ಮೇಲೆ ಹಲವರಿಂದ ಅಪ ಪ್ರಚಾರ ನಡೆಯುತ್ತಿದೆ. ಜಿಎಸ್​ಟಿ ಸುಧಾರಣೆಯಾಗಲು ಮೂರ್ನಾಲ್ಕು ವರ್ಷ ಸಮಯಬೇಕಿದೆ. ತೆರಿಗೆ ಸಂಗ್ರಹದಲ್ಲಿ ಸ್ವಲ್ಪ ವ್ಯತ್ಯಯವಾಗಿದೆ. ಮುಂಬರುವ ದಿನಗಳಲ್ಲಿ ಸುಭದ್ರ ಸರ್ಕಾರ ನಿರ್ಮಾಣ ಮಾಡಲು ಜಿಎಸ್​ಟಿ ಅನುಕೂಲವಾಗಲಿದೆ ಎಂದರು.

ಮುಂದೇನೆಂಬುದನ್ನು ನಿಶ್ಚಯಿಸಿದ್ದಾರೆ
ಅನರ್ಹ ಶಾಸಕರ ಕುರಿತು, ಅವರ ಬಗ್ಗೆ ನಮ್ಮವರು ಯಾರೇ ಹೇಳಿಕೆ ಕೊಟ್ಟರೆ ಅದು ಅವರ ವೈಯಕ್ತಿಕ ವಿಚಾರವಷ್ಟೇ. ಅನರ್ಹ ಶಾಸಕರನ್ನು ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಯಡಿಯೂರಪ್ಪನವರು ಮಾಡಿದ್ದಾರೆ. ಅವರು ಗೆಲ್ಲದಿದ್ದರೆ ಮುಂದೇನೆಂಬುದನ್ನು ನಿಶ್ಚಯಿಸಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಪರಿಸ್ಥಿತಿಯ ದುರ್ಲಾಭ
ಈರುಳ್ಳಿ ಬೆಲೆ ಏರಿಕೆ ಹಿನ್ನಲೆ ಈರುಳ್ಳಿ ಬೆಳೆದ ಜಾಗದಲ್ಲಿ ಪ್ರವಾಹ ಬಂದು ಸಂಪೂರ್ಣವಾಗಿ ಈರುಳ್ಳಿ ಹಾಳಾಗಿ ಹೋಗಿದೆ. ಇಂತಹ ಪರಿಸ್ಥಿತಿಯ ದುರ್ಲಾಭವನ್ನು ವರ್ತಕರು ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಗಾಗಲೇ ಸೂಚನೆ ನೀಡಿದೆ. ಯಾವ ಗೋಡೋನ್​ಗಳಲ್ಲಿ ಈರುಳ್ಳಿ ಸ್ಟಾಕ್ ಇಟ್ಟುಕೊಂಡಿದ್ದಾರೆಯೋ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದರು. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...