26.8 C
Bangalore
Friday, December 13, 2019

ಬಂಡಾಯ ಶಮನಕ್ಕೆ ಮಾಜಿ ಸಿಎಂಗಳ ಮದ್ದು

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಅಶೋಕ ಶೆಟ್ಟರ ಬಾಗಲಕೋಟೆ

ಜಮಖಂಡಿ ಉಪ ಚುನಾವಣೆಯಲ್ಲಿ ಕೈ-ಕಮಲ ಪಕ್ಷಗಳ ಅಭ್ಯರ್ಥಿಗಳ ನಿದ್ದೆಗೆಡಿಸಲಿದ್ದ ಬಂಡಾಯದ ಬಿಸಿ ಶಮನಗೊಂಡಿದೆ. ಈ ಬಂಡಾಯದ ಗಾಯಕ್ಕೆ ಖುದ್ದು ಆಯಾ ಪಕ್ಷಗಳ ಮಾಜಿ ಸಿಎಂಗಳೇ ಮದ್ದು ನೀಡಿದ್ದರಿಂದ ಎರಡು ಪಕ್ಷಗಳಲ್ಲಿ ಸದ್ಯಕ್ಕೆ ನಿರಾಳತೆ ಕಂಡು ಬಂದಿದೆ.

ಕಾಂಗ್ರೆಸ್ ಪಕ್ಷ ಆನಂದ ನ್ಯಾಮಗೌಡ ಅವರಿಗೆ ಟಿಕೆಟ್ ಫೈನಲ್ ಮಾಡುತ್ತಿದ್ದಂತೆ ಬಂಡಾಯ ಏಳಬಹುದು ಎನ್ನಲಾಗಿದ್ದ ಶ್ರೀಶೈಲ ದಳವಾಯಿ ಮನವೊಲಿಸಿದ್ದ ಮುಖಂಡರಿಗೆ ಮತ್ತೊಬ್ಬ ಮುಖಂಡ ಸುಶೀಲಕುಮಾರ ಬೆಳಗಲಿ ಬಂಡಾಯ ಬಾವುಟ ಹಿಡಿದಿದ್ದು ನಿದ್ದೆಗೆಡಿಸಿತ್ತು.

ಸುಶೀಲಕುಮಾರ ಬೆಳಗಲಿ ಇನ್ನೇನು ಮಂಗಳವಾರ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎನ್ನುವಂತೆ ಅವರ ಬೆಂಬಲಿಗರ ಬಿಂಬಿಸಿದ್ದರು. ಆ ಮೂಲಕ ವರಿಷ್ಠರ ಮೇಲೆ ಒತ್ತಡ ಪ್ರಭಾವವನ್ನು ಬೀರಿದ್ದರು. ಇದೇ ಕಾರಣಕ್ಕೆ ಸೋಮವಾರ ರಾತ್ರಿ ಜಮಖಂಡಿಯಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ, ಬೆಳಗಲಿ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಮಂಗಳವಾರ ಬೆಳಗ್ಗೆ ಮತ್ತೊಮ್ಮೆ ಮಾತುಕತೆ ನಡೆಸಿ ಬಂಡಾಯ ಶಮನ ಮಾಡಿದರು.

ಏತನ್ಮಧ್ಯೆ ಬೆಳಗಲಿ ಪ್ರವೇಶಕ್ಕೆ ಕೆಲ ಕಾಂಗ್ರೆಸಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಹಿಂದಿನ ಎಲ್ಲ ಘಟನೆ ಮರೆತು ಸದ್ಯಕ್ಕೆ ಒಗ್ಗಟ್ಟು ಮಂತ್ರ ಜಪಿಸುವಂತೆ ಸಿದ್ದರಾಮಯ್ಯ ಹಾಗೂ ಇತರರ ಸಲಹೆಯನ್ನು ಒಪ್ಪಿದ್ದರಿಂದ ಅಸಮಾಧಾನ ಬಗೆಹರಿದಿದ್ದು, ಎಲ್ಲವೂ ಸರಿಯಾಗಿದೆ. ನಾನು ನ್ಯಾಮಗೌಡ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಸುಶೀಲಕುಮಾರ ಬೆಳಗಲಿ ಘೊಷಿಸಿದರು.

ಬಿಎಸ್​ವೈ ಬಂದ್ರು ಸಿಂಧೂರ ತೆಪ್ಪಗಾದ್ರು

ಇನ್ನು ಬಿಜೆಪಿಯಲ್ಲಿ ಬಂಡಾಯ ಬಾವುಟ ಹಿಡಿದು ನಿಂತಿದ್ದ ಬಿ.ಎಸ್.ಸಿಂಧೂರ, ಪಕ್ಷದ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೊಷಿಸಿದ್ದರು. ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೊಂಡಿದ್ದರು. ಆದರೆ, ಮಂಗಳವಾರ ಮಧ್ಯಾಹ್ನ ಜಮಖಂಡಿಗೆ ಆಗಮಿಸಿದ ಮಾಜಿ ಸಿಎಂ ಬಿಎಸ್​ವೈ ನೇರವಾಗಿ ಸಿಂಧೂರ ಮನೆಗೆ ತೆರಳಿ ಮಾತುಕತೆ ಮೂಲಕ ಮನವೊಲಿಸಿದರು. ಬರೀ ಐದೇ ನಿಮಿಷದಲ್ಲಿ ಸಿಂಧೂರ ಬಂಡಾಯ ಬಾವುಟ ತೆಗೆದಿಟ್ಟು ಪಕ್ಷದ ವರಿಷ್ಠರ ನಿರ್ಧಾರಕ್ಕೆ ಸೈ ಎಂದರು.

ಅಷ್ಟೇ ಅಲ್ಲದೆ, ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಪರ ಪ್ರಚಾರದ ಬಹಿರಂಗ ಸಭೆಯಲ್ಲೂ ಕಾಣಿಸಿಕೊಂಡರು. ಜತೆಗೆ ಕಳೆದ ಸಲ ಶ್ರೀಕಾಂತ ಕುಲಕರ್ಣಿ ಅವರ ಸೋಲಿಗೆ ಶರಾ ಬರೆದಿದ್ದ ಬಂಡಾಯ ಅಭ್ಯರ್ಥಿ ಸಂಗಮೇಶ ನಿರಾಣಿ ನಡೆಯೂ ನಿಗೂಢವಾಗಿತ್ತು. ಇದೀಗ ಅದಕ್ಕೂ ಸ್ಪಷ್ಟತೆ ಸಿಕ್ಕಿದೆ. ಅವರು ಸಹ ಶ್ರೀಕಾಂತ ಕುಲಕರ್ಣಿ ಪರವಾಗಿ ಕೆಲಸ ಮಾಡುವ ಸಾಧ್ಯತೆ ಇದೆ. ಸಂಗಮೇಶ ನಿರಾಣಿ ಹಾಗೂ ಉಮೇಶ ಮಹಾಬಳಶೆಟ್ಟಿ ಬೆಂಬಲಿಗರ ಸಭೆ ಬುಧವಾರ ನಡೆಯಲಿದ್ದು, ಅಲ್ಲಿ ಬಿಜೆಪಿ ಬೆಂಬಲಿಸುವ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಾಮಪತ್ರ ಸಲ್ಲಿಕೆಯ ಕೊನೇ ದಿನದವರೆಗೂ ಕೈ-ಕಮಲ ಪಕ್ಷಗಳಲ್ಲಿ ಕಾಣಿಸಿಕೊಂಡಿದ್ದ ಬಂಡಾಯದ ಬಿಸಿ ಇದೀಗ ತಣ್ಣಗಾಗಿದೆ. ಇದೀಗ ಅಖಾಡ ಕೈ-ಕಮಲಗಳ ಕದನಕ್ಕೆ ಸಜ್ಜಾಗಿದೆ.

ಸಿದ್ದು ನೆನೆದು ಕಣ್ಣೀರಾದ ಕುಟುಂಬ

ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ಅನೇಕ ಮುಖಂಡರು ಶಾಸಕ ದಿ. ಸಿದ್ದು ನ್ಯಾಮಗೌಡ ಅವರ ಗುಣಗಾನ, ಅವರ ಅಭಿವೃದ್ಧಿಪರ ಚಿಂತನೆಗಳನ್ನು ಮೆಲಕು ಹಾಕುತ್ತಿದ್ದಂತೆ ವೇದಿಕೆಯಲ್ಲಿದ್ದ ಅವರ ಪತ್ನಿ, ಪುತ್ರಿ, ಇಬ್ಬರೂ ಪುತ್ರರೂ ಕಣ್ಣೀರು ಸುರಿಸಿದರು. ಈ ದೃಶ್ಯ ನೆರೆದಿದ್ದವರ ಕರಳು ಚುರ್ ಎನ್ನುವಂತೆ ಮಾಡಿತು. ಇದಕ್ಕೂ ಮುನ್ನ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಿದ್ದು ನ್ಯಾಮಗೌಡ ಅವರ ಕಿರಿಯ ಪುತ್ರ ಬಸವರಾಜ ನ್ಯಾಮಗೌಡ ಅವರನ್ನುಕಾರ್ಯಕರ್ತರು ಹೆಗಲು ಮೇಲೆ ಹೊತ್ತು ಸಾಗಿದರು. ಈ ವೇಳೆ ಬೆಂಬಲಿಗರ ಉತ್ಸಾಹ ಹಾಗೂ ಅವರ ತಂದೆಯ ಪರವಾಗಿ ಕೇಳಿ ಬರುತ್ತಿದ್ದ ಘೊಷಣೆ ಕೇಳಿ ಬಸವರಾಜ ಕಂಬನಿಗರಿದಿದ್ದು ಅನೇಕರ ಕಣ್ಣಾಲಿಗಳು ತೇವಗೊಳ್ಳುವಂತೆ ಮಾಡಿತು.

ಯಡಿಯೂರಪ್ಪ ಅವರು ನನಗೆ ತಂದೆ ಸಮಾನರು. ಇವತ್ತು ಅವರು ಮನೆಗೆ ಬಂದು ಪಕ್ಷದ ಜತೆ ಇದ್ದು ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಗೆಲ್ಲಿಸಬೇಕು ಎಂದಿದ್ದಾರೆ. ಅವರ ಮಾತಿನಂತೆ ನಡೆದುಕೊಳ್ಳುವೆ. ನನಗೆ ಯಾವುದೇ ಅಸಮಾಧಾನ ಇಲ್ಲ. ಶ್ರೀಕಾಂತ ಕುಲಕರ್ಣಿ ಅವರನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿಯಾಗಿದೆ.

| ಬಿ.ಎಸ್.ಸಿಂಧೂರ ಬಿಜೆಪಿ ಮುಖಂಡ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....