16 C
Bangalore
Saturday, December 7, 2019

ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

– ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿಯವರು ಭಾವನಾತ್ಮಕ ವಿಷಯ ಮುಂದಿಟ್ಟು ಚುನಾವಣೆಯಲ್ಲಿ ಓಟು ಪಡೆದ ಬಳಿಕ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಹಿಂದುತ್ವದ ಹೆಸರಿನಲ್ಲಿ ಅಮಾಯಕರನ್ನು ಮುಂಚೂಣಿಗೆ ಬಿಟ್ಟು ಅವರ ಜೀವದ ಮೇಲೆ ಅಧಿಕಾರ ನಡೆಸುವ ಬಿಜೆಪಿಗೆ ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತ್ರಾಸಿಯ ಕೊಂಕಣಿ ಖಾರ್ವಿ ಸಮುದಾಯ ಭವನದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಈ ಭಾಗದ ಜನರ ಹಾಗೂ ಮೀನುಗಾರರ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಮೈತ್ರಿ ಸರ್ಕಾರದ ಧರ್ಮ. ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ನ.6ರ ನಂತರ ಮನೆಗೆ ಕಳುಹಿಸುವುದಾಗಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸುತ್ತದೆ. ಕಾಂಗ್ರೆಸ್ ಪಕ್ಷದ 78 ಹಾಗೂ ಜೆಡಿಎಸ್‌ನ 34 ಶಾಸಕರು ಒಗ್ಗಟ್ಟಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯುತ್ತೇವೆ ಎಂದರು.
ಒಂಭತ್ತುವರೆ ವರ್ಷಗಳಿಂದ ಅಪ್ಪ-ಮಗ ಈ ಭಾಗದ ಲೋಕಸಭಾ ಸದಸ್ಯರಾಗಿದ್ದು, ಅವರ ಸಾಧನೆ ಏನು ಎಂದು ಪ್ರಶ್ನಿಸಿದ ಸಿಎಂ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ನಿಮ್ಮ ಪರವಾಗಿ ಲೋಕಸಭೆಯಲ್ಲಿ ಮಾತನಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿಲ್ಲ. ಬೈಂದೂರಿನ ಜನತೆ ಪುನಃ ಇಂತಹವರನ್ನು ಲೋಕಸಭೆಗೆ ಆಯ್ಕೆ ಮಾಡುತ್ತಿರಾ ಎಂದು ಪ್ರಶ್ನಿಸಿದರು.
ಉಪಚುನಾವಣೆ ಮುಗಿದು ನಾಲ್ಕು ತಿಂಗಳಲ್ಲಿ ಸಾರ್ವತ್ರಿಕ ಲೋಕಸಭೆ ಚುನಾವಣೆ ನಡೆಯಲಿದೆ. ಈ ನಾಲ್ಕುವರೆ ತಿಂಗಳಿನಲ್ಲಿ ನಿಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ನಾವು ಬಗೆಹರಿಸದಿದ್ದರೆ ಮುಂದೆ ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಿಮ್ಮ ಮುಂದೆ ಮತ ಕೇಳಲು ಬರುವುದಿಲ್ಲ ಎಂದರು.
ಈ ಭಾಗದ ಶಾಸಕರಿಗೆ ಏನೂ ಗೊತ್ತಿಲ್ಲ. ಜನಪ್ರತಿನಿಧಿಯಾಗಿ ಹೇಗೆ ಕೆಲಸ ಮಾಡಬೇಕೆಂಬ ತಿಳಿವಳಿಕೆ ಇಲ್ಲ. ಭಾವನಾತ್ಮಕ ವಿಷಯ ಇಟ್ಟು ಮತ ಪಡೆದು ಹೋದವರು ವಿಧಾನಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿರುವುದನ್ನು ನಾನು ನೋಡಿಲ್ಲ ಎಂದು ಸ್ಥಳೀಯ ಶಾಸಕರನ್ನು ಸಿಎಂ ಕೆಣಕಿದರು.

 ಖಜಾನೆ ಖಾಲಿಯಾಗಿಲ್ಲ:  ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಬೀದಿ ವ್ಯಾಪಾರಿಗಳ ಹಾಗೂ ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಇಡೀ ರಾಜ್ಯದ 174 ಭಾಗಗಳಲ್ಲಿ ತೆರೆಯಲು ಆದೇಶ ನೀಡಲಾಗಿದೆ. ಬಡ್ಡಿ ರಹಿತ ಸಾಲ ನೀಡುವ ಯೋಜನೆ ಸಿದ್ಧಪಡಿಸಲಾಗಿದೆ. ಗರ್ಭಿಣಿಯರಿಗೆ, ಹಿರಿಯ ನಾಗರಿಕರಿಗೆ ಹೆಚ್ಚುವರಿ ಹಣ ಕೊಡುವ ಯೋಜನೆ ಸಹಿತ ಅನೇಕ ಜನಪರ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ, ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಕೋನ ರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಎಂ.ಎ.ಗಫೂರ್ ಮತ್ತಿತರು ಉಪಸ್ಥಿತರಿದ್ದರು.
ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಂದೇಶ ಭಟ್ ಉಪ್ಪುಂದ ವಂದಿಸಿದರು.

ಮೈತ್ರಿಕೂಟ ಅಭ್ಯರ್ಥಿ ಗೆಲುವು ನಿಶ್ಚಿತ:  ಈ ಬಾರಿ ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜನ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಮೈತ್ರಿಕೂಟದ ಎಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ ಸಹಿತ ಅನೇಕ ಕಾಂಗ್ರೆಸ್ ನಾಯಕರು ಮತಯಾಚನೆ ನಡೆಸುತ್ತಿದ್ದು, ಬಹುಮತದಿಂದ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಾಲಮನ್ನಾ ಗೊಂದಲವಿಲ್ಲ: ಸಾಲಮನ್ನಾ ಮಾಡಲು ಮಾನದಂಡ ನಿಗದಿಪಡಿಸಿ ಈಗಾಗಲೇ ಆದೇಶ ನೀಡಲಾಗಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ 50 ಸಾವಿರ ರೂ. ಹಾಗೂ ಈಗ ಒಂದು ಲಕ್ಷ ವರೆಗಿನ ರೈತರ ಸಾಲಮನ್ನಾ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...