21 C
Bengaluru
Wednesday, January 22, 2020

ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮಂಡ್ಯ: ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಡಿ.5ರಂದು ನಡೆದಿದ್ದು, ಸೋಮವಾರ ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಕಾರ್ಯವು ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಮತ ಎಣಿಕೆಗೆ 14 ಟೇಬಲ್ಗಳನ್ನು ವ್ಯವಸ್ಥೆ ಮಾಡಲಾಗಿದ್ದು, 19 ಸುತ್ತುಗಳಲ್ಲಿ ಮತ ಎಣಿಕೆ ನಡೆಸಲಾಗುವುದು. ಪ್ರತಿಯೊಂದು ಎಣಿಕೆ ಟೇಬಲ್ಗೆ ಒಬ್ಬ ಮೇಲ್ವಿಚಾರಕ, ಒಬ್ಬರು ಎಣಿಕೆ ಸಹಾಯಕರು ಹಾಗೂ ಒಬ್ಬ ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ. ಅಂತೆಯೇ, ಅಂಚೆ ಮತಪತ್ರಗಳ ಎಣಿಕೆಗೆ 1ಟೇಬಲ್ ಹಾಗೂ ಇಟಿಪಿಬಿಎಸ್ ಮತಪತ್ರಗಳ ಎಣಿಕೆಗಾಗಿ 1ಟೇಬಲ್ ಇದ್ದು, ಈ ಟೇಬಲ್‌ಗಳಿಗೂ ಒಬ್ಬ ಎಣಿಕೆ ಮೇಲ್ವಿಚಾರಕ ಹಾಗೂ ಒಬ್ಬ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ.

ಮತ ಎಣಿಕೆ ಕೊಠಡಿಗಳಿಗೆ ಮೂರು ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಅಂಚೆ ಮತಪತ್ರಗಳ ಎಣಿಕೆ ಹಾಗೂ ಇಟಿಪಿಬಿಎಸ್ ಮತಗಳ ಎಣಿಕೆ ನಡೆಯುವ ಸ್ಥಳದಲ್ಲಿಯೂ ಸಿಸಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಹಾಗೂ ಅಂಚೆ ಮತಪತ್ರಗಳ ಎಣಿಕೆ ಕೊಠಡಿಯಲ್ಲಿ ವಿಡಿಯೋಗ್ರಾಫರ್ ನೇಮಿಸಿ, ಎಣಿಕೆಯ ಸಂಪೂರ್ಣ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಧ್ಯಮ ಕೇಂದ್ರದ ವ್ಯವಸ್ಥೆ: ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರ ತೆರೆಯಲಾಗಿದ್ದು, ಕೇಂದ್ರಕ್ಕೆ ದೂರದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣಾ ಆಯೋಗ ಸಿದ್ಧಪಡಿಸಿರುವ ಸುವಿಧಾ ತಂತ್ರಾಂಶದಲ್ಲಿ ಪ್ರತಿ ಸುತ್ತಿನ ಮತಗಳ ಎಣಿಕೆ ನಂತರ, ಅಭ್ಯರ್ಥಿವಾರು ಪಡೆದ ಮತಗಳ ಅಂಕಿ ಅಂಶಗಳನ್ನು ಪ್ರದರ್ಶಿಸಲು ಪ್ರತ್ಯೇಕ ವ್ಯವಸ್ಥೆಯನ್ನು ಮಾಧ್ಯಮ ಕೇಂದ್ರದೊಳಗೆ ಮಾಡಲಾಗಿರುತ್ತದೆ.

ಮಾಧ್ಯಮ ಕೇಂದ್ರದ ನಿರ್ವಹಣೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಎಣಿಕೆ ಕೇಂದ್ರದೊಳಗೆ ಮೊಬೈಲ್ ನಿಷೇಧಿಸಲಾಗಿದೆ.

5 ಮತಗಟ್ಟೆಗಳ ವಿವಿಪ್ಯಾಟ್ ಸ್ಲಿಪ್ ಎಣಿಕೆ: ಚುನಾವಣಾ ಆಯೋಗದ ನಿರ್ದೇಶನದ ರೀತ್ಯಾ ಎಲ್ಲ ಸುತ್ತುಗಳ ಮತಗಳ ಎಣಿಕೆ ಘೋಷಣೆಯಾದ ನಂತರ, ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು ಮತಗಟ್ಟೆಗಳ ಪೈಕಿ 5 ಮತಗಟ್ಟೆಗಳನ್ನು ಕ್ಷೇತ್ರದ ಚುನಾವಣಾಧಿಕಾರಿ ಲಾಟರಿ ಮೂಲಕ ಆಯ್ಕೆ ಮಾಡಿ, ಆ ಮತಗಟ್ಟೆಯ ವಿವಿ ಪ್ಯಾಟ್‌ನಲ್ಲಿರುವ ಪೇಪರ್ ಸ್ಲಿಪ್‌ಗಳನ್ನು ಮತ ಎಣಿಕೆ ಕೊಠಡಿಯೊಳಗೆ ಪ್ರತ್ಯೇಕವಾಗಿ ಸ್ಥಾಪಿಸಲಾಗಿರುವ ವಿವಿ ಪ್ಯಾಟ್ ಸ್ಲಿಪ್ ಕೌಂಟಿಂಗ್ ಬೂತ್‌ನೊಳಗೆ ಒಂದರ ನಂತರ ಒಂದರಂತೆ ಎಣಿಕೆ ಮಾಡಲು ಕ್ರಮ ವಹಿಸಲಾಗುವುದು.

ಮೊಬೈಲ್, ಕ್ಯಾಮರಾ ನಿಷೇಧ:ಪ್ರಜಾಪ್ರಾತಿನಿಧ್ಯ ಅಧಿನಿಯಮ 1951ರ ಸೆಕ್ಷನ್128 ಮತ್ತು ಚುನಾವಣೆ ನಡೆಸುವ ನಿಯಮಗಳ ನಿಯಮ 39ರಂತೆ ಎಣಿಕೆ ಏಜೆಂಟರ್‌ಗಳು, ಎಣಿಕೆ ಸಿಬ್ಬಂದಿ ಹಾಗೂ ಚುನಾವಣಾ ಕಾರ್ಯನಿರತ ಅಧಿಕಾರಿ/ಸಿಬ್ಬಂದಿ ಮೊಬೈಲ್ ಫೋನ್ ಅಥವಾ ಕ್ಯಾಮರಾಗಳನ್ನು ಮತ ಎಣಿಕೆ ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಕ್ಕೆ ಅವಕಾಶವಿರುವುದಿಲ್ಲ.

ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ: ಮತ ಎಣಿಕೆ ದಿನವಾ ಸೋಮವಾರ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಳಗ್ಗೆ 6 ಗಂಟೆಯಿಂದ ಡಿ.10ರ ಮಧ್ಯರಾತ್ರಿಯವರೆಗೆ ಯಾವುದೇ ಮೆರವಣಿಗೆ ಮಾಡುವುದು, ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, ಪಟಾಕಿ, ಸ್ಫೋಟಕ ವಸ್ತುಗಳನ್ನು ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸುವುದನ್ನು ತಡೆಗಟ್ಟಲು, ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಮತ ಎಣಿಕೆ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮತ ಎಣಿಕೆಯನ್ನು ಶಾಂತಿಯುತವಾಗಿ ನಡೆಸುವ ಸಲುವಾಗಿ ಡಿ.8ರ ರಾತ್ರಿ 12ಗಂಟೆಯಿಂದ ಡಿ.9ರ ರಾತ್ರಿ 12ಗಂಟೆವರೆಗೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಎಲ್ಲ ತರಹದ ಮದ್ಯದ ಅಂಗಡಿ/ಬಾರ್ ಆ್ಯಂಡ್ ರೆಸ್ಟೊರೆಂಟ್/ಕ್ಲಬ್ಗಳಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಣೆ ಮತ್ತು ಶೇಖರಣೆಗಳನ್ನು ನಿಷೇಧಿಸಿ, ಪಾನ ನಿರೋಧ ನವೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...