ನವದೆಹಲಿ: ಭಾರತದ ಚುನಾವಣಾ ಆಯೋಗವು (ECI) ಮಂಗಳವಾರ (ಅಕ್ಟೋಬರ್ 15) ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ಜತೆಗೆ ಎರಡು ಲೋಕಸಭಾ ಸ್ಥಾನಗಳ ಉಪಚುನಾವಣೆ ದಿನಾಂಕಗಳನ್ನು ಈಗಾಗಲೇ ಪ್ರಕಟಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ (Wayanad By Election) ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಸದ್ಯ ಈ ಮಾಹಿತಿ ಅದಾಗಲೇ ಹೊರಬಿದ್ದಿತ್ತು. ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಕೈಬಿಟ್ಟ ವಯನಾಡು ಕ್ಷೇತ್ರದಿಂದಲೇ ಪ್ರಿಯಾಂಕಾ ಗಾಂಧಿ ಈ ಬಾರಿಯ ಬೈಎಲೆಕ್ಷನ್ನಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಇದೀಗ ಈ ವಿಷಯ ಅಧಿಕೃತವಾಗಿದೆ.
ಇದನ್ನೂ ಓದಿ: ಸರ್ಕಾರಿ ಭೂಮಿ ಉಳುಮೆ ಮಾಡುತ್ತಿರುವವರಿಗೆ ಶೀಘ್ರ ಹಕ್ಕುಪತ್ರ
ಈ ಕುರಿತು ಅಧಿಕೃತವಾಗಿ ಘೋಷಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಚುನಾವಣೆಗೆ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧಿಸುವುದು ಖಚಿತ ಎಂಬುದನ್ನು ಹೊಸ ಪ್ರಕಟಣೆ ಮೂಲಕ ಖಾತ್ರಿ ಪಡಿಸಿದ್ದಾರೆ.
47 ವಿಧಾನಸಭಾ ಕ್ಷೇತ್ರಗಳೊಂದಿಗೆ ಉಪಚುನಾವಣೆ ನಡೆಸಲಾಗುವ ಏಕೈಕ ಲೋಕಸಭಾ ಕ್ಷೇತ್ರ ವಯನಾಡು. ನಾಮಪತ್ರ ಸಲ್ಲಿಕೆಗೆ ಇದೇ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನಾಂಕದಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ.
ಅದೊಂದು ಘಟನೆ..! ಇನ್ಯಾವತ್ತು ಆತನೊಂದಿಗೆ ಕೆಲಸ ಮಾಡಲ್ಲ: ಅಚ್ಚರಿ ಹೇಳಿಕೆ ಕೊಟ್ಟ ನಟಿ ಶಮಾ