22.5 C
Bengaluru
Sunday, January 19, 2020

ಉಪಚುನಾವಣೆ ಸೋಲು-ಗೆಲುವಿನ ಲೆಕ್ಕಚಾರ ಶುರು

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಚಿಕ್ಕಬಳ್ಳಾಪುರ: ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿರುವ ಜತೆಗೆ ಬೆಟ್ಟಿಂಗ್ ಅಬ್ಬರವೂ ಜೋರಾಗಿದೆ. ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತ್ರಿಕೋನ ಪೈಪೋಟಿ ನಡೆದಿರುವುದು ಲಿತಾಂಶದ ಮೇಲೆ ಕುತೂಹಲ ಮೂಡಿಸಿದ್ದು, ಯಾರಿಗೆ ಗೆಲುವು, ಯಾರಿಗೆ ಸೋಲು? ಯಾರು ಯಾವ ಸ್ಥಾನದಲ್ಲಿರುತ್ತಾರೆ ಎನ್ನುವ ಬಿಸಿಬಿಸಿ ಚರ್ಚೆ ಗಲ್ಲಿ ಗಲ್ಲಿಯಲ್ಲೂ ನಡೆಯುತ್ತಿದೆ. ಈಗಾಗಲೇ ಪಕ್ಷದ ನಾಯಕರು ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಾದ ಮತ ಚಲಾವಣೆಯ ಅಂಕಿ-ಅಂಶಗಳ ದಾಖಲೆ ಹಿಡಿದುಕೊಂಡು ಗಳಿಕೆ ಮತ್ತು ಕೈ ತಪ್ಪಿದ ಮತಗಳ ಕ್ರೋಡೀಕರಣದ ಸಮಗ್ರ ಮಾಹಿತಿ ಬರೆದುಕೊಂಡು ತಮ್ಮದೇ ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಪ್ರಸ್ತುತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾಕರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಂ.ಆಂಜನಪ್ಪ ನಡುವೆಯೇ ನೇರ ಹಣಾಹಣಿ ನಡೆದಿದೆ. ಬಹುತೇಕ ಸಮೀಕ್ಷೆಗಳ ವರದಿಗಳು ಕಮಲದ್ದೇ ಮೇಲುಗೈ ಎಂದು ಹೇಳಿವೆ. ಇತ್ತ ಕೈ ಪಾಳಯ ಮಾತ್ರ ಕ್ಷೇತ್ರದಲ್ಲಿ ನೆಲೆಯೇ ಇಲ್ಲದ ಬಿಜೆಪಿ ಗೆಲುವು ಅಸಾಧ್ಯ, ಸಮಬಲದ ಸಮರದಲ್ಲಿ ಕಾಂಗ್ರೆಸ್‌ಗೆ ಅಲ್ಪ ಮತಗಳ ಅಂತರದಲ್ಲಿ ಜಯ ಸಿಗುವ ಸಾಧ್ಯತೆ ಇದೆ ಎನ್ನುವ ವಿಶ್ವಾಸದಲ್ಲಿದೆ. ಇನ್ನೂ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎನ್ನಲಾಗುತ್ತಿರುವ ಜೆಡಿಎಸ್ ಲೆಕ್ಕಾಚಾರವೇ ಬೇರೆಯಾಗಿದೆ, ಇಬ್ಬರ ಜಗಳದಲ್ಲಿ ಮೂರನೇಯವರಾದ ನಮಗೆ ಲಾಭದ ಲ ಎಂಬ ನಿರೀಕ್ಷೆಯಲ್ಲಿದೆ. ಹಣ, ಜಾತಿ, ವ್ಯಕ್ತಿ ಲೆಕ್ಕಾಚಾರ: ಮತದಾರರಿಗೆ ಹಂಚಿರುವ ಹಣದ ಪ್ರಮಾಣ, ಸಮುದಾಯದ ಬೆಂಬಲ ಮತ್ತು ವೈಯಕ್ತಿಕ ವರ್ಚಸ್ಸು ಆಧರಿಸಿ ಸೋಲು ಗೆಲುವಿನ ಲೆಕ್ಕಾಚಾರ ಹಾಕಲಾಗುತ್ತಿದೆ. ಶತಾಯ ಗತಾಯ ಹ್ಯಾಟ್ರಿಕ್ ಗೆಲುವು ಸಾಧಿಸಲು ಬಯಸಿರುವ ಅಭ್ಯರ್ಥಿಯ ವೈಯಕ್ತಿಕ ವರ್ಚಸ್ಸು ಮತ್ತು ಅಭಿವೃದ್ಧಿ ಕೆಲಸಗಳು, ಅಬ್ಬರದ ಪ್ರಚಾರ ಕ್ಷೇತ್ರದಲ್ಲಿ ಕಮಲ ಅರಳಿಸುತ್ತದೆ ಎನ್ನಲಾಗುತ್ತಿದೆ. ಇನ್ನು ಕ್ಷೇತ್ರ ಮೊದಲಿನಿಂದಲೂ ಕೈ ಭದ್ರಕೋಟೆ. ಸಾಂಪ್ರದಾಯಿಕ ಎಸ್ಸಿ ಮತ್ತು ಎಸ್ಟಿ, ಅಲಸಂಖ್ಯಾತರ ಮತಗಳು ನಮಗೆ ಸಿಕ್ಕಿವೆ. ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕೆಂಬ ಜನರ ತೀರ್ಮಾನದಿಂದ ಗೆಲುವು ನಮ್ಮದಾಗಲಿದೆ ಎನ್ನುವುದು ಕೈಪಡೆ ವಾದ. ಇದರ ನಡುವೆ ಕೊನೇ ಕ್ಷಣದಲ್ಲಿ ಅಖಾಡಕ್ಕಿಳಿದರೂ ಪ್ರಚಾರದಲ್ಲಿ ಹಿಂದೆ ಬೀಳದೆ, ಸಮ್ಮಿಶ್ರ ಸರ್ಕಾರದ ಕೊಡುಗೆ ಮತ್ತು ನಿಷ್ಠಾವಂತ ಕಾರ್ಯಕರ್ತರ ಪಡೆಯ ಜತೆಗೆ ಕಾಂಚಾಣದ ಪ್ರಭಾವದಿಂದ ತೆನೆ ಭರ್ಜರಿ ಸಲು ನೀಡುತ್ತದೆ ಎಂಬುದು ದಳಪತಿಗಳ ವಾದ. ಪ್ರತಿಷ್ಠೆಗೆ ಬೆಟ್ಟಿಂಗ್ ಹೆಚ್ಚಳ: ಕ್ಷೇತ್ರದಲ್ಲಿ ಮತದಾನ ಮುಗಿಯುತ್ತಿದ್ದಂತೆ ಬೆಟ್ಟಿಂಗ್ ಸದ್ದು ಮಾಡುತ್ತಿದೆ, ತಮ್ಮ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ವಾರ್ಡ್‌ವಾರು ಮತ್ತು ಗ್ರಾಮವಾರು ಮುಖಂಡರು ಬೆಟ್ಟಿಂಗ್ ಕಟ್ಟುತ್ತಿದ್ದಾರೆ, ಬಿಜೆಪಿ ಅಭ್ಯರ್ಥಿ ಸುಧಾಕರ್ ಪರವಾಗಿಯೇ ಬಾಜಿ ಜೋರಾಗಿದೆ. ಪೆರೇಸಂದ್ರದಲ್ಲಿ ಗುತ್ತಿಗೆದಾರನೊಬ್ಬ 1ಲಕ್ಷ ರೂ, ಚಿಕ್ಕಬಳ್ಳಾಪುರದಲ್ಲಿ ನಗರಸಭೆ ಚುನಾವಣಾ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬ 50 ಸಾವಿರ ರೂ, ಮಂಚೇನಹಳ್ಳಿಯಲ್ಲಿ ಅಂಗಡಿ ಮಾಲೀಕ ಒಂದು ತಿಂಗಳ ಉಚಿತ ರೇಷನ್ ವಿತರಣೆ ಬೆಟ್ಟಿಂಗ್ ಕಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಾಜಕೀಯ ಪಕ್ಷದ ಯುವ ಘಟಕದ ಹೋಬಳಿ ಅಧ್ಯಕ್ಷ ಕಾಂಗ್ರೆಸ್ ಪರ ಗೋವಾ ಉಚಿತ ಟೂರ್ ಪ್ಯಾಕೇಜ್ ಘೋಷಿಸಿದ್ದಾನೆ. ಇನ್ನೂ ಬಾಜಿಯ ಅನೇಕ ವ್ಯವಹಾರ ಒಳಗೊಳಗೆ ಹೆಚ್ಚಿಗೆ ನಡೆಯುತ್ತಿದೆ. ರಿಲ್ಯಾಕ್ಸ್ ಮೂಡ್‌ನಲ್ಲಿ ಅಭ್ಯರ್ಥಿಗಳು, ಮುಖಂಡರು: ಕಾಲಿಕೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಕೈಗೊಂಡಿದ್ದ ಅಭ್ಯರ್ಥಿಗಳು ಮತದಾನ ಮುಗಿಯುತ್ತಿದ್ದಂತೆ ಚಿಕ್ಕಬಳ್ಳಾಪುರದಿಂದ ದೂರ ಉಳಿದಿದ್ದು, ರಾಜಕೀಯ ಚಟುವಟಿಕೆಗೆ ತಾತ್ಕಾಲಿಕ ವಿರಾಮ ಹೇಳಿ ುಲ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಡಾ ಕೆ.ಸುಧಾಕರ್ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಟೆಂಪಲ್ ರನ್ ಮಾಡುತ್ತಿದ್ದು, ಆಂಧ್ರದ ಕರ್ನೂಲು ಜಿಲ್ಲೆಯ ಅಹೋಬಲಂನ ನರಸಿಂಹಸ್ವಾಮಿ ದೇವಾಲಯ, ತಿರುಪತಿಯ ವೆಂಕಟೇಶ್ವರಸ್ವಾಮಿ ದರ್ಶನಕ್ಕೆ ತೆರಳಿದ್ದಾರೆ. ಕಾಂಗ್ರೆಸ್‌ನ ಎಂ.ಆಂಜನಪ್ಪ ಶುಕ್ರವಾರ ತಡರಾತ್ರಿಯವರೆಗೂ ಚಿಕ್ಕಬಳ್ಳಾಪುರದ ಸಿವಿವಿ ಕ್ಯಾಂಪಸ್‌ನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿ, ಈಗ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೆಡಿಎಸ್‌ನ ಎನ್.ರಾಧಾಕೃಷ್ಣ ಮತದಾನದ ದಿನದಂದೇ ಕ್ಷೇತ್ರ ಬಿಟ್ಟಿದ್ದು ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾರೆ. ಉಳಿದಂತೆ ಡಿ.ಆರ್.ನಾರಾಯಣಸ್ವಾಮಿ ದೇವನಹಳ್ಳಿ, ಪಕ್ಷೇತರ ಅಭ್ಯರ್ಥಿ ಮೆಹಬೂಬ್ ಭಾಷಾ ಹುಟ್ಟೂರು ನಂದಿಯಲ್ಲಿ ಉಳಿದುಕೊಂಡಿದ್ದಾರೆ. ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ಣಿರಾಜ್ ಎಂದಿನಂತೆ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...