ರಾಜ್ಯದ 3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್​

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೊಂದಿಗೆ ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿವಮೊಗ್ಗ, ಶಾಸಕ ಶ್ರೀರಾಮುಲು ರಾಜೀನಾಮೆಯಿಂದ ತೆರವಾಗಿದ್ದ ಬಳ್ಳಾರಿ ಮತ್ತು ಸಚಿವ ಸಿ.ಎಸ್​. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರಗಳಿಗೆ ನವೆಂಬರ್​ 3 ರಂದು ಉಪಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ … Continue reading ರಾಜ್ಯದ 3 ಲೋಕಸಭೆ, 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್​