ಯತ್ನಾಳ್​, ಜಾರಕಿಹೊಳಿ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ, ಉಪಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ: BY Vijayendra

Yatnal Jarakiholi Vijayendra

ಬಳ್ಳಾರಿ: ಶಾಸಕರಾದ ಬಸನ್​ಗೌಡ ಪಾಟೀಲ್​ ಯತ್ನಾಳ್​, ರಮೇಶ್​ ಜಾರಕಿಹೊಳಿ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಆಟ ಬಹಳ ದಿನ ನಡೆಯುವುದಿಲ್ಲ. ಇಂತಹ ಹೇಳಿಕೆಗಳು ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ (BY Vijayendra) ವಾಗ್ದಾಳಿ ನಡೆಸಿದ್ದಾರೆ.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವವರೆಗೂ ಪ್ರಚಾರಕ್ಕೆ ಹೋಗುವುದಿಲ್ಲ ಎಂಬ ರಮೇಶ್​ ಜಾರಕಿಹೊಳಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ  ವಿಜಯೇಂದ್ರ (BY Vijayendra), ಈ ರೀತಿಯ ಹೇಳಿಕೆಗಳಿಗೆ ಯಾರ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ.  ಯಾರು ಪುಗ್ಗಟ್ಟೆ ಮಾತನಾಡುತ್ತಾರೆ, ಯಾರು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದಾರೆ ಎಂಬುದು ನಮ್ಮ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

Siddu Vijayendra

ಉಪಚುನಾವಣೆಯನ್ನು ವಿಜಯೇಂದ್ರ ಒಬ್ಬರೇ ಎದುರಿಸುತ್ತಿಲ್ಲ. ನಮ್ಮ ಕಾರ್ಯ ಕರ್ತರು ತಮ್ಮ ಶಕ್ತಿ ಮೂಲಕ ಎದುರಿಸುತ್ತಿದ್ದಾರೆ. ತಾವೇ ಅಭ್ಯರ್ಥಿ ಎಂಬಂತೆ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಮೂರೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ. ಯತ್ನಾಳ್​ ಹಾಗೂ ಜಾರಕಿಹೊಳಿ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಇಂತಹ ಹೇಳಿಕೆಗಳು ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೋರಾಟ ಮುಂದುವರಿಸುತ್ತೇವೆ

ವಕ್ಛ್​ ಕಾನೂನು ಬಳಸಿಕೊಂಡು ರೈತರ ಜಮೀನು ಕಬಳಿಸುವ ಯತ್ನ ರಾಜ್ಯದಲ್ಲಿ ನಿರಾತಂಕವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪಿತೂರಿಯಿಂದ ದೇಶದ್ರೋಹಿ ಜಮೀರ್‌ ಅಹ್ಮದ್​ ಅವರಿಂದ ಜಮೀನು ಕಬಳಿಸುವ ಕೆಲಸವಾಗುತ್ತಿದೆ. ಅಧಿಕಾರಿಗಳನ್ನು ಬೆದರಿಸಿ ಮಠ-ಮಾನ್ಯಗಳ ಆಸ್ತಿ ಕಬಳಿಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಜನರಿಂದ ಕಬಳಿಸಿರುವ ವಕ್ಛ್​ ಜಮೀನು ಕೂಡಲೇ ವಾಪಸ್ ಮಾಡಬೇಕು. ಹತ್ತಾರು ವರ್ಷಗಳಿಂದ ಉಳುಮೆ ಮಾಡಿರುವ ರೈತರ ಮೇಲೆ ದರ್ಪ ತೋರಿಸುತ್ತಿರುವ ಸರ್ಕಾರದ ನಡೆ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.

Rohit Sharma ಬದಲು ಈತನನ್ನು ನಾಯಕನನ್ನಾಗಿ ನೇಮಿಸಿ… ನ್ಯೂಜಿಲೆಂಡ್​ ವಿರುದ್ಧ ಸರಣಿ ಸೋಲಿನ ಬೆನ್ನಲ್ಲೇ ಮಾಜಿ ಆಟಗಾರನ ಸಲಹೆ ವೈರಲ್​

ಪಟಾಕಿ ಹಚ್ಚಿದ ಡಬ್ಬದ ಮೇಲೆ ಕೂತರೆ Auto Rickshaw ಗಿಫ್ಡ್​ ಮಾಡುವುದಾಗಿ ಸ್ನೇಹಿತರ ಚಾಲೆಂಜ್​; ಯುವಕ ಸಾವು, 6 ಮಂದಿ Arrest​​

 

 

 

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…