ಸಂತೋಷ್​ ಆತ್ಮಹತ್ಯೆ ಯತ್ನ ಕುರಿತ ಊಹಾಪೋಹಕ್ಕೆ ಸ್ಪಷನೆ ಕೊಟ್ಟ ಸಿಎಂ ಪುತ್ರ

by vijayendra- santhosh
Published on

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್​ ಆತ್ಮಹತ್ಯೆ ಯತ್ನ ನಮಗೂ ಶಾಕ್​ ತಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸದ್ಯ ಸಂತೋಷ್ ಚೇತರಿಸಿಕೊಳ್ಳುತ್ತಿದ್ದಾರೆ. ಇವತ್ತು ಅವರನ್ನು ಜನರಲ್ ವಾರ್ಡ್​ಗೆ ಶಿಫ್ಟ್ ಮಾಡ್ತಾರೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ ಎಂದು ಸುದ್ದಿಗಾರರಿಗೆ ವಿಜಯೇಂದ್ರ ಪ್ರತಿಕ್ರಿಯಿಸಿದರು.

ಸಂತೋಷ್​ ರಾಜೀನಾಮೆ ಕೊಟ್ಟಿದ್ದಾರೆ ಅಂತ ಊಹಾಪೋಹ ಹಬ್ಬಿದೆ. ಇಂತಹ ಊಹಾಪೋಹಗಳಿಗೆ ನಾನು ಉತ್ತರಿಸಲ್ಲ. ಮರಿಸ್ವಾಮಿ ಕಾವೇರಿ ನಿವಾಸಕ್ಕೆ ಬರೋದು ಹೊಸದಲ್ಲ. ಸಂತೋಷ್​ಗೆ ರಾಜೀನಾಮೆ ಕೊಡಿ ಅಂತ ಯಾರೂ ಕೇಳಿಲ್ಲ. ಯಾರಿಗೆ ಯಾವ ಸ್ಥಾನವನ್ನ ಕೊಡಬೇಕು ಅನ್ನೋದು ಮುಖ್ಯಮಂತ್ರಿಗಳಿಗೆ ಗೊತ್ತಿದೆ ಎಂದು ವಿಜಯೇಂದ್ರ ತಿಳಿಸಿದರು.

ಶುಕ್ರವಾರ ಸಂಜೆ ಸಂತೋಷ್​ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಂದು ರಾತ್ರಿಯೇ ಅವರನ್ನು ಎಂ.ಎಸ್​.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಇನ್ನು ಸಂತೋಷ್​ ಆತ್ಮಹತ್ಯೆ ಯತ್ನ ಸಂಬಂಧ ಕಾರವಾರದಲ್ಲಿ ಶನಿವಾರ ಬಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಯಾವುದೋ ವೈಯಕ್ತಿಕ ವಿಡಿಯೋ ಎತ್ತಿಕೊಂಡು ಹೋಗಿ ಎಂಎಲ್​ಸಿ ಮತ್ತು ಸಚಿವರಿಗೆ ಕೊಟ್ಟ ಮಾಹಿತಿ ಎರಡ್ಮೂರು ತಿಂಗಳ ಹಿಂದೇ ಇತ್ತು. ಎಂಎಲ್​ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋಷ್​ಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು ಎಂದು ಕೇಳಿದ್ದೆ. ಅದೇ ವಿಚಾರವಾಗಿ ಬೇಸರಗೊಂಡು ಸಂತೋಷ್​ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net