More

  ರಾಜ್ಯದಲ್ಲಿ ಇಂದಿನಿಂದ ವಿಜಯ ಶಕೆ; BJP ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ

  ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

  ಪಕ್ಷಕ್ಕೆ ಹೊಸ ಸಾರಥಿಯಾಗಿ ವಿಜಯೇಂದ್ರ ಅವರು ನೇಮಕಗೊಂಡು,  ನಿರ್ಗಮಿತ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಂದ ಅಧಿಕಾರ ವಹಿಸಿಕೊಂಡಿದ್ದಾರೆ. ಈ ವೇಳೆ ಪಕ್ಷದ ಹಲವಾರು ನಾಯಕರು ಭಾಗಿಯಾಗಿದ್ದರು.

  ಆರು ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿ ಈಗ ಬಿವೈ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಯಡಿಯೂರಪ್ಪ ಬಣದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಹಲವು ದಿನಗಳಿಂದ ಹೈಕಮಾಂಡ್ ಅಳೆದು ತೂಗಿ ವಿಜಯೇಂದ್ರ ಅವರಿಗೆ ಕರ್ನಾಟಕ ಬಿಜೆಪಿ ಪಟ್ಟ ಕಟ್ಟಿದೆ.

  ರಾಜ್ಯದಲ್ಲಿ ಇಂದಿನಿಂದ ವಿಜಯ ಶಕೆ; BJP ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ

  ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್​.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

  ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಸುಣ್ಣ ಬಣ್ಣಗಳ ಜತೆಗೆ ದೀಪಗಳಿಂದಲೂ ಕರ್ನಾಟಕ ಬಿಜೆಪಿ ಕಚೇರಿ ಕಂಗೊಳಿಸುತ್ತಿದೆ. ಹೋಮ-ಹವನಗಳನ್ನು ಮಾಡಲಾಗಿದೆ. ಬಿಜೆಪಿ ಕಚೇರಿಯನ್ನು ತೋರಣದಿಂದ ಅಲಂಕರಿಸಲಾಗಿದೆ. ಹಾಗೇ ಜಗನಾಥ್ ಭವನದ ಮುಂದೆ ರಂಗೋಲಿ ಬಿಡಿಸಲಾಗಿದೆ. ಕರ್ನಾಟಕದ ಬಿಜೆಪಿ  ಯುವ ಹವಾ ಶುರುವಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts