ವಿಜಯವಾಣಿ ಸುದ್ದಿಜಾಲ ಬೈಂದೂರು
ಗ್ರಾಮ ಮಟ್ಟದಲ್ಲಿ ಒಕ್ಕೂಟದ ಅಧ್ಯಕ್ಷರು ಸೇವಾ ಮನೋಭಾವದಿಂದ ಧರ್ಮಸ್ಥಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಉಡುಪಿ ಪ್ರಾದೇಶಿಕ ವಿಭಾಗ ನಿರ್ದೇಶಕ ದುಗ್ಗೇಗೌಡ ಹೇಳಿದರು. ನಾಗೂರು ಶ್ರೀ ಗೋಪಾಲಕೃಷ್ಣ ಒಡೆಯರ ಮಠ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಒಕ್ಕೂಟ ಅಧ್ಯಕ್ಷರ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ಬೈಂದೂರು ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಸಾಧನಾ ವರದಿ ಮಂಡಿಸಿದರು. ತಾಲೂಕು ಯೋಜನಾಧಿಕಾರಿ ಕೆ.ವಿನಾಯಕ ಪೈ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸುರೇಖಾ ವಂದಿಸಿದರು. ಕಿರಿಮಂಜೇಶ್ವರ ಮೇಲ್ವಿಚಾರಕ ಭರತ್ ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ತಾಲೂಕಿನ ಎಲ್ಲ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿ, ವಲಯಗಳ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ಇದ್ದರು.