More

    ಈಶ್ವರಪ್ಪ ಸ್ಪರ್ಧೆಯಿಂದ ಬಿವೈಆರ್‌ಗೆ ಸಮಸ್ಯೆಯಿಲ್ಲ: ಕೆಬಿಪಿ

    ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಕ್ಷೇತರರಾಗಿ ಸ್ಪರ್ಧಿಸಿರುವುದು ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಗೆಲುವಿಗೆ ತೊಡಕಾಗುವುದಿಲ್ಲ. ಇನ್ನೂ ಸಮಯವಿರುವುದರಿಂದ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಯಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

    ಏ.18ರಂದು ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರುತ್ತಾರೆ. ಮುಂದಿನ ದಿನಗಳಲ್ಲಿ ಅವರು ಜಿಲ್ಲೆಯ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ. ಎನ್‌ಡಿಎ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಬಿವೈಆರ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್‌ನ ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ. ಈಶ್ವರಪ್ಪ ಹಾಗೂ ಗೀತಾ ನಾಮಪತ್ರ ಸಲ್ಲಿಕೆ ವೇಳೆ ನೆರೆದಿದ್ದ ಜನರಿಗಿಂತಲೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಏ.18ರಂದು ಪಾಲ್ಗೊಳ್ಳಲಿದ್ದಾರೆ ಎಂದರು.
    ಗ್ಯಾರಂಟಿಗಳನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕೆ.ಬಿ.ಪ್ರಸನ್ನಕುಮಾರ್, ಅವರು ಯಾವುದೇ ದುರುದ್ದೇಶದಿಂದ ಆ ಹೇಳಿಕೆ ನೀಡಿರಲಿಲ್ಲ. ಅದಕ್ಕೆ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಅದು ಮುಗಿದ ಅಧ್ಯಾಯ ಎಂದು ಹೇಳಿದರು.
    ನಗರಾಧ್ಯಕ್ಷ ದೀಪಕ್ ಸಿಂಗ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ರಾಮಕೃಷ್ಣ, ಎಸ್.ವಿ.ರಾಜಮ್ಮ, ತ್ಯಾಗರಾಜ್, ನರಸಿಂಹಮೂರ್ತಿ ಗಂಧದಮನೆ, ಸಿದ್ದಪ್ಪ, ರಘು, ಸಂಗಯ್ಯ, ಅಬ್ದುಲ್ ವಾಜೀದ್, ಆಯನೂರು ಶಿವಾನಾಯ್ಕ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts