More

  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ

  ನವದೆಹಲಿ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಧಿಕಾರ ಸ್ವೀಕರಿಸಿದ ಬಳಿಕ ಬಿ.ವೈ. ವಿಜಯೇಂದ್ರ ಶನಿವಾರ (ಡಿಸೆಂಬರ್ 02) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜನ್ಮದಿನದಂದು ಭೇಟಿ ಮಾಡಿ ಶುಭಾಶಯ ಕೋರಿ ಕೃತಜ್ಞತೆ ಸಲ್ಲಿಸಿದ್ದಾರೆ.

  ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಇಂದು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು.

  ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಬಿ.ವೈ. ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

  ಈ ಸಂದರ್ಭದಲ್ಲಿ ಕೇಂದ್ರ ಸಚಿವಾರದ ಪ್ರಲ್ಹಾದ್​ ಜೋಶಿ, ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ (OBC) ರಾಜೇಶ್​ ಅವರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts