ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್​ | Vice President

Untitled design - 2025-09-12T102528.534
Published on

Vice President : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ(ಸೆ.12) ನಡೆದ ಸಮಾರಂಭದಲ್ಲಿ ಚಂದ್ರಾಪುರಂ ಪೊನ್ನುಸ್ವಾಮಿ(C.P) ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸೆಪ್ಟೆಂಬರ್ 9 ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ NDA ಅಭ್ಯರ್ಥಿ ರಾಧಾಕೃಷ್ಣನ್ 452 ಮತಗಳನ್ನು ಪಡೆದರು.ವಿರೋಧ ಪಕ್ಷದ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net